
CHITRADURGA NEWS | 28 AUGUST 2026
ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
ಇದನ್ನೂ ಓದಿ: ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಸಾರ್ವಜನಿಕರು ಹಾಗೂ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಈ ಹಿಂದೆ ಆಚರಿಸಿಕೊಂಡು ಬಂದಿರುವಂತೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಶ್ರೀಕೃಷ್ಣ ವೃತ್ತದಲ್ಲಿ ಈ ಬಾರಿಯೂ ಜಯಂತಿಯ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಇದನ್ನೂ ಓದಿ: ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಜಯಂತಿ ಅಂಗವಾಗಿ ಕಾರ್ಯಕ್ರಮದ ದಿನದಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಗುವುದು. ಶ್ರೀ ಕೃಷ್ಣನ ತತ್ವಗಳು ಮತ್ತು ಸಂದೇಶಗಳ ಕುರಿತು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ.ಜಿ.ಕೆ.ಪ್ರೇಮ ಉಪನ್ಯಾಸ ನೀಡುವರು.
ಸಂಗೀತ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು. ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಸಮಾಜದ ಮುಖಂಡರಾದ ಸಿ.ಟಿ.ಕೃಷ್ಣಮೂರ್ತಿ, ಬಿ.ಈ.ಆಕರ್ಶ್ ಯಾದವ್, ಟಿ.ಜಗದೀಶ್, ಟಿ.ನಾಗಪ್ಪ, ಹೆಚ್.ವಿ.ಶಿವಣ್ಣ, ಡಿ.ಟಿ.ಸಂಪತ್ ಕುಮಾರ್, ಎಸ್.ಸಿದ್ದಪ್ಪ, ಸಿ.ರೇವಣಸಿದ್ದಪ್ಪ, ಎನ್.ನಿಜಲಿಂಗಪ್ಪ, ಪಾರ್ಥ, ಆರ್.ರಮೇಶ, ಜಿ.ಕೆ.ಮಹಾಲಿಂಗಪ್ಪ, ಎಸ್.ಲಕ್ಷ್ಮಿಕಾಂತ್, ಎಂ.ತಿಮ್ಮಣ್ಣ, ಕೂನಿಕೆರೆ ರಾಮಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

