
CHITRADURGA NEWS | 11 DE3CEMBER 2025
ಚಿತ್ರದುರ್ಗ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೂಡಾ ಅವರಂತೆ ರಾಜಕೀಯ, ಸಾಮಾಜಿಕವಾಗಿ ಮುಂದೆ ಬರಬೇಕು. ಸಮಾನತೆಯಲ್ಲಿ ಗುರುತಿಸಿಕೊಳ್ಳಬೇಕು ಎಂದು ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 11 ಡಿಸೆಂಬರ್ 2025 | ಚನ್ನಗಿರಿ, ಭೀಮಸಮುದ್ರ ಮಾರುಕಟ್ಟೆ ರೇಟ್ಸ್

ನಗರದ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದಲ್ಲಿ ನಡೆದ ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.
ಈ ಸಮಿತಿ ಯಾವುದೇ ಸಂಘಟನೆಗೆ ಪರ್ಯಾಯ ಅಲ್ಲ. ಯಾವುದೇ ರಾಜಕೀಯ ಪಕ್ಷಕ್ಕೂ ಕೂಡಾ ಪರ್ಯಾಯವಲ್ಲ. ಇದು ಶ್ರೀಮಠದ ಮಾರ್ಗದರ್ಶನದಲ್ಲಿ ನಡೆಯುವಂತಹ ಸಂಘಟನೆ. ಇದರಲ್ಲಿ ಕೆಲಸ ಮಾಡುವವರು ಈ ಹಿಂದೆ ಯಾವ ಸಂಘಟನೆಯಲ್ಲಿ ಇದ್ದರು, ಈಗ ಯಾವ ಪಕ್ಷದಲ್ಲಿದ್ದಾರೆ, ಮುಂದೆ ಎಲ್ಲಿರುತ್ತಾರೆ ಎಂಬ ಪ್ರಶ್ನೆ ಬೇಡ, ಅದರ ಅಗತ್ಯ ಇಲ್ಲ. ನಾವು ಎಲ್ಲೆ ಇರಲ್ಲಿ ನಮ್ಮ ಮಾದಾರ ಚನ್ನಯ್ಯ ಸೇವಾ ಸಮಿತಿಗೆ ಬದ್ಧರಾಗಿರಬೇಕು ಎಂದು ತಿಳಿಸಿದರು.
ಮುಖಂಡ ರವಿ ಮಲ್ಲಾಪುರ ಮಾತನಾಡಿ, ಸಮುದಾಯದ ಅಸ್ತಿತ್ವ ಅಸ್ಮಿತೆಗೆ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸುಮಾರು ಎರಡೂವರೆ ದಶಕಗಳ ಸಾಧನೆ ಮಾಡಿದ್ದಾರೆ. ಅವರ ಮಾರ್ಗದರ್ಶನದಂತೆ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಸೇವಾ ಸಮಿತಿಯ ಸಂಘಟನಾ ಬಲವರ್ಧನೆ ನಮ್ಮ ಮೊದಲ ಗುರಿಯಾಗಲಿದೆ ಎಂದರು.
ಇದನ್ನೂ ಓದಿ: ನವೋದಯ ವಿದ್ಯಾಲಯ | ಡಿ.13 ರಂದು ಪ್ರವೇಶ ಪರೀಕ್ಷೆ
ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಪರಶುರಾಮ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಬ್ಯಾಲಹಾಳ್, ಖಜಾಂಚಿ ನಾಗರಾಜಪ್ಪ ಎಲ್. ದೇವರಾಜ್, ಅನಂತ್, ಪೋಲಿಸ್ ಬೇಟೆ ಪ್ರಸನ್ನ, ರಾಮಾಂಜನೇಯ, ಶ್ರೀನಿವಾಸ್, ಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
