
CHITRADURGA NEWS | 26 FEBRUARY 2026
ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಬುಧವಾರ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ | ಅರ್ಜಿ ಆಹ್ವಾನ
ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ ನಡೆದಿದ್ದು, ನಂತರ ಪಲ್ಲಕ್ಕಿಯಲ್ಲಿ ಸ್ವಾಮಿಯನ್ನು ಕುಳ್ಳರಿಸಿದ ದೇವಾಲಯದ ಸುತ್ತಾ-ಮುತ್ತಾ ಪ್ರದೇಶದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕಾರ್ಯಕ್ರಮ ನಡೆಯಿತು.
ಕೆಂಡಾರ್ಚನೆ ಸಮಯದಲ್ಲಿ ಕಡೂರಿನಿಂದ ಬಂದಿದ್ದ ಚನ್ನವೀರಪ್ಪ ಮತ್ತು ತಂಡದವರು ಸ್ವಾಮಿಯ ಮುಂದೆ ವೀರಭದ್ರ ಸ್ವಾಮಿಯ ಒಡಪುಗಳನ್ನು ಹೇಳುವುದರ ಮೂಲಕ ಪಲ್ಲಕ್ಕಿಯ ಮೆರವಣಿಗೆಯನ್ನು ನಡೆಸಲಾಯಿತು.
ಮೆರವಣಿಗೆಯ ದಾರಿಯುದ್ದಕ್ಕೂ ಆಗಮಿಸಿದ ಭಕ್ತಾಧಿಗಳು ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ, ವೀರಭದ್ರ ಸ್ವಾಮಿಜೀ ಕೀ ಎಂಬ ಘೋಷಣೆಗಳು ಕೇಳಿ ಬಂದವು.
ನೂತನವಾಗಿ ನಿರ್ಮಾಣ ಮಾಡಲಾದ ಸ್ವಾಮಿಯ ದೇವಾಲಯವನ್ನು ವಿವಿಧ ರೀತಿಯ ಹೂಗಳು ಹಾಗೂ ವಿದ್ಯುತ್ ದೀಪಗಳಿಂದ ಆಲಂಕಾರ ಮಾಡಲಾಗಿತ್ತು.
ಇದನ್ನೂ ಓದಿ: ಪರೀಕ್ಷಾ ಸಮಯದಲ್ಲಿ ಏಕಾಗ್ರತೆ ವೃದ್ಧಿಗೆ ಆಯುಷ್ ಇಲಾಖೆಯ ವಿದ್ಯಾರ್ಥಿ ಚೇತನ ಸಹಕಾರಿ
ಸ್ವಾಮಿಯನ್ನು ಕುಳ್ಳರಿಸಿದ ಪಲ್ಲಕ್ಕಿಯನ್ನು ವಿವಿಧ ರೀತಿಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಅದರಲ್ಲಿ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಮೆರವಣಿಗೆಯನ್ನು ನಡೆಸಲಾಯಿತು.
ನಂತರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾದ ಕೆಂಡದ ಕುಂಡದಲ್ಲಿ ಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತ ಭಕ್ತಾಧಿಗಳು ಅದರ ಮೇಲೆ ಆಗಮಿಸುವುದರ ಮೂಲಕ ಕೆಂಡಾರ್ಚನೆ ಕಾರ್ಯಕ್ರಮವನ್ನು ನೇರವೇರಿಸಲಾಯಿತು. ತದ ನಂತರ ಭಕ್ತಾಧಿಗಳು ಕೆಂಡವನ್ನು ತುಳಿಯುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.
ಇದೇ ರೀತಿ ದೇವರನ್ನು ಹೊತ್ತ ಪಲ್ಲಕ್ಕಿಯೂ ಕೆಂಡದ ಮೇಲೆ ಮೂರು ಸುತ್ತು ಹಾಕಲಾಯಿತು. ರಥೋತ್ಸವ ಸಮಯದಲ್ಲಿ ಆಗಮಿಸುವ ಭಕ್ತಾಧಿಗಳಿಗೆ ಶ್ರೀ ಮಾವಿನಹಳ್ಳಿ ಬಸವೇಶ್ವರಸ್ವಾಮಿ ಟ್ರಸ್ಟ್‍ವತಿಯಿಂದ ದಾಸೋಹ ಸೇವೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ಮಾವಿನಹಳ್ಳಿ ಬಸವೇಶ್ವರಸ್ವಾಮಿ ಟ್ರಸ್ಟ್‍ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಮೊಬೈಲ್ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
ಇಂದು ರಥೋತ್ಸವ:
ಫೆ.26 ರಂದು ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ 5 ಗಂಟೆಗೆ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ.
ಫೆ.27 ರಂದು ಸಂಜೆ 5 ಕ್ಕೆ ಕಂಕಣ ವಿಸರ್ಜನೆ ಹಾಗೂ ಮಹಾ ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ರಥೋತ್ಸವದ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
