CHITRADURGA NEWS | 23 MARCH 2025
ಚಿತ್ರದುರ್ಗ: ನಗರದ ಆನೆ ಬಾಗಿಲು ಬಳಿಯಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 30ನೇ ವಾರ್ಷಿಕೋತ್ಸವ ಹಾಗೂ ಕಳಸಾಭಿಷೇಕ ಅಂಗವಾಗಿ ಮಾ.21 ರಿಂದ 23ರವರೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಯಿತು.
Also Read: ಏಪ್ರಿಲ್ 16, 17 ಸರ್ಕಾರಿ ನೌಕರರ ಕ್ರೀಡಾಕೂಟ | ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ
ಮಾ.21ನೇ ಶುಕ್ರವಾರ ಸಂಜೆ ರಾಕ್ಷೆಘ್ನ ಹೋಮ, ವಾಸ್ತು ಹೋಮ, ದುರ್ಗಾ ದೀಪ ನಮಸ್ಕಾರ ಪೂಜೆ ಮಾ.22 ರ ಶನಿವಾರ ಬೆಳಿಗ್ಗೆ ನವಗ್ರಹ ಶಾಂತಿ, ಗಂಗಾ ಶಾಂತಿ, ನಾಗಶಾಂತಿ ಸಂಜೆ 5.30ಕ್ಕೆ ಅಧಿವಾಸದ ಹೋಮ, ಬ್ರಹ್ಮಕಲಶ ಸ್ಥಾಪನೆ, ಅಷ್ಟಾವಧಾನ ಸೇವೆ, ನಂತರ ಕಳಸ ಸ್ಥಾಪನೆ ಮಾ.23 ಭಾನುವಾರ ಕಲಾವೃದ್ಧಿ ಹೋಮ, ಶಾಂತಿ ಪ್ರಾಯಶ್ಚಿತ್ತ, ಹೋಮಾದಿಗಳು ಬ್ರಹ್ಮ ಕಲಶಾಭಿಷೇಕ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಪೂಜಾ ಸೇವಾಕರ್ತರು ಹಾಗೂ ಸಮಸ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಪೂಜಾ ಕಾರ್ಯಕ್ರಮ ನಡೆಸಲಾಯಿತು.
Also Read: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?
ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಜಿ.ಪಂ.ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಕೆ.ಸಿ.ವೀಣಾ, ಡಾ.ಕೀರ್ತಿ ಮಲ್ಲಿಕಾರ್ಜನ್, ಡಾ.ಮುಕುಂದರಾವ್, ರ‍್ಯ ವೈಶ್ಯ ಸಂಘದ ಅಧ್ಯಕ್ಷ ಶ್ರೀನಿವಾಸ್, ಟೌನ್ ಕೋ-ಆಪರೇಟಿವ್ ಸೂಸೈಟಿ ಅಧ್ಯಕ್ಷ ನಿಶಾನಿ ಜಯ್ಯಣ್ಣ, ಕನ್ನಿಕಾ ಪರಮೇಶ್ವರ ಬ್ಯಾಂಕ್‌ನ ಅಧ್ಯಕ್ಷರಾದ ಪ್ರಾಣೇಶ್, ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಗೋಪಾಲರಾವ್ ಜಾಧವ್ ಹಾಗೂ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
