Connect with us

    ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಶ್ರೀನಿವಾಸ್ ಸಮರ್ಥರು | ಡಾ.ಪ್ರಭಾ ಮಲ್ಲಿಕಾರ್ಜುನ್

    prabha malikarjuna

    ಮುಖ್ಯ ಸುದ್ದಿ

    ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಶ್ರೀನಿವಾಸ್ ಸಮರ್ಥರು | ಡಾ.ಪ್ರಭಾ ಮಲ್ಲಿಕಾರ್ಜುನ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 30 MAY 2024
    ಚಿತ್ರದುರ್ಗ: ದಾವಣಗೆರೆ ಜಿಲ್ಲೆಯ ಮತದಾರರು ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ವಿಧಾನ ಪರಿಷತ್‌ಗೆ ಕಳುಹಿಸಿಕೊಡಬೇಕು ಎಂದು ಕಾಂಗ್ರೆಸ್‌ ನಾಯಕಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಮನವಿ ಮಾಡಿದರು.

    ಶಿಕ್ಷಣ ಸಂಸ್ಥೆಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ‘ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪ್ರತಿನಿಧಿಸಲು ಶ್ರೀನಿವಾಸ್‌ ಸಮರ್ಥ ವ್ಯಕ್ತಿಯಾಗಿದ್ದಾರೆ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಇನ್ನೂ ನಾಲ್ಕು ವರ್ಷ ಕಾಂಗ್ರೆಸ್ ಅಧಿಕಾರ ಇರಲಿದೆ. ನಾವು ಉತ್ತಮ ತಂಡವಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

    ‘ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಡಿ.ಟಿ.ಶ್ರೀನಿವಾಸ್ ತೊಡಗಿಸಿ ಕೊಂಡಿದ್ದು, 32 ವಿಧಾನಸಭಾ ಕ್ಷೇತ್ರದಲ್ಲಿ ಸುತ್ತಾಡಿದ್ದಾರೆ. ಅವರದೇ ಆದ ಶಿಕ್ಷಣ ಸಂಸ್ಥೆ ಇದ್ದು, ಶಿಕ್ಷಕರು ಹಾಗೂ ಸಂಸ್ಥೆಗಳ ಸಮಸ್ಯೆಗಳನ್ನು ಅರಿತಿದ್ದು, ಕೆಎಎಸ್ ಅಧಿಕಾರಿಯಾಗಿ ಕೆಲಸ ಮಾಡಿದ ಅನುಭವವೂ ಇದೆ. ಆದ್ದರಿಂದ ಅವರಿಗೆ ಮತ ನೀಡಬೇಕು’ ಎಂದರು.

    ಕ್ಲಿಕ್ ಮಾಡಿ ಓದಿ: ಪತ್ರಿಕೆ ವಿತರಕರ ನಡಿಗೆ ಕೋಟೆ ನಗರಿ ಕಡೆಗೆ | ಸೆಪ್ಟೆಂಬರ್‌ 8 ರಂದು ರಾಜ್ಯ ಸಮ್ಮೇಳನ

    ‘ಕಾಂಗ್ರೆಸ್‌ ಪಕ್ಷ ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ಉದ್ದೇಶಿಸಿದ್ದು, ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಒಪಿಎಸ್‌ ಜಾರಿಗೊಳಿಸುವಾಗ ಅನುದಾನಿತ ಶಾಲೆಯ ಶಿಕ್ಷಕರನ್ನು ಸರ್ಕಾರ ಪರಿಗಣಿಸುತ್ತದೆ, ಜ್ಯೋತಿ ಸಂಜೀವಿನಿಯನ್ನು ಜಾರಿಗೊಳಿಸಲಾಗಿದೆ’ ಎಂದು ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ ತಿಳಿಸಿದರು.

    prabha

    ದಾವಣಗೆರೆಯಲ್ಲಿ ಮತಯಾಚನೆ ಮಾಡಿದ ಡಾ.ಪ್ರಭಾ ಮಲ್ಲಿಕಾರ್ಜುನ್

    ‘ಶಿಕ್ಷಕರು ಹಾಗೂ ಸರ್ಕಾರಿ ನೌಕರರನ್ನು ಕಾಪಾಡುವುದು ಕಾಂಗ್ರೆಸ್ ಪಕ್ಷ. ಸಿದ್ದರಾಮಯ್ಯ ಸರ್ಕಾರವಿದ್ದಾಗ 6ನೇ ವೇತನ ಆಯೋಗದ ವರದಿಗೆ ಅನುಮೋದನೆ ನೀಡಿದ್ದರು. ಹಿಂದಿನ ಬಿಜೆಪಿ ಸರ್ಕಾರ 7ನೇ ವೇತನ ಆಯೋಗದ ವರದಿಯನ್ನು ಇಟ್ಟರೇ ಹೊರತು ಸಂಪೂರ್ಣ ವರದಿಯನ್ನು ಅಂಗೀಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಚುನಾವಣೆ ನೀತಿ ಸಂಹಿತೆ ಬರುವ ಮೊದಲೇ ಅಂಗೀಕಾರ ಮಾಡಿದೆ’ ಎಂದರು.

    ಕ್ಲಿಕ್ ಮಾಡಿ ಓದಿ: ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ | ಜಿಪಂ ಸಿಇಒ ಎಸ್‌.ಜೆ.ಸೋಮಶೇಖರ್‌ ಸೂಚನೆ

    ಶಾಸಕ ಶಾಮನೂರು ಶಿವಶಂಕರಪ್ಪ,ಮುಖಂಡರಾದ ಅಣಬೇರು ರಾಜಣ್ಣ, ದಿನೇಶ್ ಕೆ.ಶೆಟ್ಟಿ, ಅಥಣಿ ವೀರಣ್ಣ, ಎ.ನಾಗರಾಜ್, ಮೈನುದ್ದೀನ್‌, ಗಡಿಗುಡಾಳ್ ಮಂಜುನಾಥ್, ಬಾತಿ ಶಿವಕುಮಾರ್‌ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top