ಮುಖ್ಯ ಸುದ್ದಿ
ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ‘ಮಕ್ಕಳ ಸಂತೆ ನಮ್ಮ ಜೊತೆ’ | ದೈನಂದಿನ ಬದುಕಿನ ಪ್ರಾಯೋಗಿಕ ಕಲಿಕೆ

CHITRADURGA NEWS | 18 JANUARY 2024
ಚಿತ್ರದುರ್ಗ (CHITRADURGA): ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಗುರುವಾರ ‘ಮಕ್ಕಳ ಸಂತೆ ನಮ್ಮ ಜೊತೆ’ ದೈನಂದಿನ ಬದುಕಿನ ಪ್ರಾಯೋಗಿಕ ಕಲಿಕೆ ಕಾರ್ಯಕ್ರಮ ನಡೆಯಿತು.
ಒಂದನೇ ತರಗತಿಯ 150 ವಿದ್ಯಾರ್ಥಿಗಳು ಶಾಲೆ ಆವರಣದಲ್ಲಿ ಹಣ್ಣಿನ ಅಂಗಡಿ ಹಾಕಿದ್ದರು. ಎಸ್‌ಆರ್‌ಎಸ್ ಶಿಕ್ಷಣ ಸಮೂಹ ಸಂಸ್ಥೆ ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಹಣ್ಣುಗಳನ್ನು ಖರೀದಿಸುವ ಮೂಲಕ ಮೇಳಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ: ಹರಿವಾಯುಸ್ತುತಿ ಪಾರಾಯಣದ ಹರಿದಾಸ ಹಬ್ಬಕ್ಕೆ 23ನೇ ಸಂಭ್ರಮ | ಅಯೋಧ್ಯಾರಾಮನ ಭವ್ಯ ಶೋಭಾಯಾತ್ರೆ

ವಿದ್ಯಾರ್ಥಿಗಳು ಮಾರುಕಟ್ಟೆಯಿಂದ ಬಗೆಬಗೆಯ ಹಣ್ಣುಗಳಾದ ಬಾಳೆಹಣ್ಣು, ಸೇಬು, ಸೀತಾಫಲ,ಕಿತ್ತಳೆ, ಪಪ್ಪಾಯಿ, ದ್ರಾಕ್ಷಿ, ಕಲ್ಲಂಗಡಿ, ಮೊಸುಂಬಿ, ಅನಾನಸ್ ಸೇರಿದಂತೆ ಇನ್ನಿತರೆ ಬಗೆಬಗೆಯ ಹಣ್ಣುಗಳನ್ನು ತಂದು ಮಾರಾಟ ಮಾಡಿದರು. ಈ ಮೂಲಕ ದೈನಂದಿನ ಬದುಕಿನ ಪ್ರಾಯೋಗಿಕ ಕಲಿಕೆ ಹಾಗೂ ಮಕ್ಕಳಲ್ಲಿ ಲಾಭ-ನಷ್ಟದ ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿಸಲಾಯಿತು. ಮಕ್ಕಳು ಗ್ರಾಹಕರನ್ನು ತನ್ನತ್ತ ಸೆಳೆದು ಪ್ರೀತಿ ಪೂರ್ವಕವಾಗಿ ವ್ಯವಹರಿಸಿದರು.
ಇದನ್ನೂ ಓದಿ: ಲಂಚ ಕೊಡಿಸಿದ್ದೆ ಎಂದಿರುವ ಶಾಸಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಬೇಕು | ಎಸ್.ಲಿಂಗಮೂರ್ತಿ

‘ಮಕ್ಕಳಲ್ಲಿ ವ್ಯಾಪಾರ ಮನೋಭಾವನೆ ಮತ್ತು ವ್ಯವಹಾರಿಕ ಜೀವನ ನಿರ್ವಹಣೆಯ ಮಹತ್ವ ತಿಳಿಸುವ ಉದ್ದೇಶದಿಂ ಮೇಳ ಆಯೋಜಿಸಲಾಗಿದೆ. ವ್ಯವಹಾರಿಕ ಗಣಿತ ತಮ್ಮೆಲ್ಲರ ಜೀವನದಲ್ಲಿ ಹಾಸುಹೊಕ್ಕಾಗಿದೆ. ಆದರೆ ವ್ಯವಹಾರ ಗಣಿತವನ್ನು ಮೇಳದ ಮೂಲಕ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗುತ್ತಿದೆ’ ಎಂದು ಶಾಲೆ ಪ್ರಾಂಶುಪಾಲ ಎಂ.ಎಸ್.ಪ್ರಭಾಕರ್ ತಿಳಿಸಿದರು.
ಇದನ್ನೂ ಓದಿ: ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆ
ಪೋಷಕರು, ಶಿಕ್ಷಕರು, ಸಾರ್ವಜನಿಕರು, ಗ್ರಾಹಕರು ಉತ್ಸಾಹದಿಂದ ತಮಗಿಷ್ಟವಾದ ಹಣ್ಣುಗಳನ್ನು ವಿದ್ಯಾರ್ಥಿಗಳು ನಿಗದಿಪಡಿಸಿದ ದರಕ್ಕೆ ಖರೀದಿಸಿದರು. ಎಸ್‌ಆರ್‌ಎಸ್ ಸಂಸ್ಥೆ ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ ಹಾಗೂ ಎಲ್ಲಾ ವಿಭಾಗದ ಶೈಕ್ಷಣಿಕ ಸಂಯೋಜಕರು ಮತ್ತು ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.
