
CHITRADURGA NEWS | 20 MAY 2024
ಚಿತ್ರದುರ್ಗ: ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯ ಶೈಕ್ಷಣಿಕ ವರ್ಷಕ್ಕೆ ಸೋಮವಾರ ವೈಭವದ ಚಾಲನೆ ದೊರೆಯಿತು.
ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದ ಶಾಲಾ ಆವರಣದಲ್ಲಿ ಮಕ್ಕಳು ಸಂಭ್ರಮದಿಂದ ಹೆಜ್ಜೆ ಹಾಕಿದರು. ವೀರಗಾಸೆ ನೃತ್ಯ ಮತ್ತಷ್ಟು ಉತ್ಸಾಹ ತುಂಬಿತು.
ಕ್ಲಿಕ್ ಮಾಡಿ ಓದಿ: ವಿವಿಸಾಗರ ತಲುಪಿದ ವೇದಾವತಿ | ಒಂದೇ ದಿನಕ್ಕೆ ಡ್ಯಾಂ ಸೇರಿದ ನೀರೆಷ್ಟು ಗೊತ್ತಾ
ಪೋಷಕರೊಂದಿಗೆ ಆಗಮಿಸಿದ್ದ ವಿದ್ಯಾರ್ಥಿಗಳನ್ನ ಶಿಕ್ಷಕರು ಆರತಿ ಬೆಳಗಿ, ತಿಲಕವಿಟ್ಟು ಹಾಗೂ ಹೂ ಮತ್ತು ಅಕ್ಷತೆ ಹಾಕುವುದರೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿಗಳು ಹೊಸ ಹುರುಪಿನಿಂದ ತಮ್ಮ ತಮ್ಮ ಶಾಲಾ ಕೊಠಡಿಗಳಿಗೆ ತೆರಳಿದರು. ಶಾಲೆಯ ಪುನಾರಾರಂಭವಾಗಿದ್ದನ್ನು ಕಂಡು ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿತು.
ಎಸ್‌ಆರ್‌ಎಸ್ ಶಿಕ್ಷಣ ಸಮೂಹ ಸಂಸ್ಥೆ ಉಪಾಧ್ಯಕ್ಷ ಬಿ.ಎಲ್.ಅಮೋಘ, ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ ಪ್ರಾಂಶುಪಾಲರಾದ ಎಂ.ಎಸ್.ಪ್ರಭಾಕರ್, ಎಂ.ಎಸ್.ಅರ್ಪಿತ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
