
CHITRADURGA NEWS | 05 NOVEMBER 2025
ಹೊಳಲ್ಕೆರೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುತ್ತಾರೋ ಅಂತಹ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಬಹುಮಾನ ನೀಡಲಾಗುವುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಮಾಲಿನ್ಯ ಮುಕ್ತ ಕರ್ನಾಟಕಕ್ಕಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಪಣತೊಟ್ಟಿದೆ | ಸಚಿವ ಡಿ. ಸುಧಾಕರ್

ಹೊಳಲ್ಕೆರೆ ಪಟ್ಟದ ಸಂವಿಧಾನ ಸೌಧದಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಹೊಳಲ್ಕೆರೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 11000 ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,
ಮಕ್ಕಳ ಕಲಿಕೆಯಲ್ಲಿ ಆಹಾರ ಉತ್ತಮವಾದ ಪಾತ್ರ ವಹಿಸುತ್ತದೆ. ಈ ಹಿನ್ನಲೆಯಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವು ಸಲುವಾಗಿ ಈ ಯೋಜನೆ ಜಾರಿ ಮಾಡಲಾಗಿದೆ.
ನಮ್ಮ ಸರ್ಕಾರಿ ಶಾಲೆಯಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ, ಪಠ್ಯ ಪುಸ್ತಕ, ಶೂ, ಮಧ್ಯಾಹ್ನ ಬಿಸಿಯೂಟ, ಕಾಳು, ಹಾಲು, ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಇತರೆ ಪೌಷ್ಟಿಕವಾದ ಆಹಾರಗಳನ್ನು ನಿಡಲಾಗುತ್ತದೆ.
ಇದನ್ನೂ ಓದಿ: 66 ಶಿವಶರಣ-ಶರಣೆಯರ ವಚನ ಕಂಠಪಾಠ ಸ್ಪರ್ಧೆ
ಇವುಗಳನ್ನು ಸೇವಿಸುವುದರ ಮೂಲಕ ಮಕ್ಕಳು ಆರೋಗ್ಯವಂತರಾಗಿ ಹಾಗೂ ಶಾಲೆಯಲ್ಲಿ ಸಿಗುವಂತೆ ಗುಣಮಟ್ಟದ ಶಿಕ್ಷಣ ಪಡೆದೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರನ್ನು ಮಾಡುವುದರ ಮೂಲಕ ತಂದೆ-ತಾಯಿ ಶಾಲೆಗೆ ಹೆಸರನ್ನು ತರುವಂತ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸರ್ಕಾರ 14 ವರ್ಷದೊಳಗಿನ ಮಕ್ಕಳಿಗೆ ಉಚಿತವಾದ ಶಿಕ್ಷಣವನ್ನು ನೀಡುತ್ತಿದೆ. ಸರ್ಕಾರಿ ಶಾಲೆಯಲ್ಲಿ ಎಲ್ಲವೂ ಸಹಾ ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಶಿಕ್ಷಣವಂತರಾಗಬೇಕಿದೆ.
ನಮ್ಮ ತಾಲ್ಲೂಕಿನಲ್ಲಿನ ಸರ್ಕಾರಿ ಮಕ್ಕಳಿಗೆ ಸಿಗುವಂತ ಸೌಲಭ್ಯಗಳು ರಾಜ್ಯದ ಯಾವ ತಾಲ್ಲೂಕಿನಲ್ಲಿಯೂ ಸಹಾ ಸಿಗುತ್ತಿಲ್ಲ. ಸರ್ಕಾರಿ ಶಾಲೆಯ ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆಗೆ ಬರಲು ಬಸ್‍ಗಳನ್ನು ಸಹಾ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕುರಿ ಕಳ್ಳನ ಬಂಧನ | 9.92 ಲಕ್ಷ ಬೆಲೆ ಬಾಳುವ ಕುರಿಗಳು ವಶ
ಪುರಸಭೆ ಉಪಾಧ್ಯಕ್ಷರಾದ ನಾಗರತ್ನ, ಪುರಸಭೆ ಮಾಜಿ ಅಧ್ಯಕ್ಷ ಆರ್.ಎ.ಅಶೋಕ್, ಹೊಳಲ್ಕೆರೆ ತಹಶೀಲ್ದಾರ್ ವಿಜಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ವೆಂಕಟೇಶ್, ಸುರೇಂದ್ರನಾಥ್, ಪರಮೇಶ್ವರಪ್ಪ ಸೇರಿದಂತೆ ಶಿಕ್ಷಕರಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
