By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    13 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    14 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    14 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    18 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    47 minutes ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    1 day ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 day ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
Reading: ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ 

News Desk Chitradurga News
Last updated: 15 May 2026 20:57
News Desk Chitradurga News
4 months ago
Share
ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಪೂರ್ವ ಸಿದ್ಧತಾ ಸಭೆ
ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಪೂರ್ವ ಸಿದ್ಧತಾ ಸಭೆ
SHARE

CHITRADURGA NEWS | 15 MAY 2026

ಚಿತ್ರದುರ್ಗ: ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಇದೇ ಮೇ 18 ರಿಂದ 23 ರವರೆಗೆ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಜಿಲ್ಲೆಗೆ ಕಾಲಿಟ್ಟ ಮಳೆರಾಯ | ಭಾರೀ ಗಾತ್ರದ ಆಲಿಕಲ್ಲು | ಬೆಂದು ಹೋಗಿದ್ದ ಇಳೆಗೆ ತಂಪು | ರೈತರ ನಿಟ್ಟುಸಿರು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‍ಎಸ್‍ಎಲ್‍ಸಿ ವಾರ್ಷಿಕ-1ನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಅನ್ನೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜವಾಬ್ದಾರಿಯುತವಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ವಿಚಕ್ಷಣಾ ಜಾಗೃತಿದಳವನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಭರಮಸಾಗರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ 

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಇದೇ ಮೇ18 ರಿಂದ 23 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ 748 ವಿದ್ಯಾರ್ಥಿಗಳು, ಚಿತ್ರದುರ್ಗ-1494, ಹಿರಿಯೂರು-688, ಹೊಳಲ್ಕೆರೆ-445, ಹೊಸದುರ್ಗ-726, ಮೊಳಕಾಲ್ಮುರು-323 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 4424 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಪರೀಕ್ಷೆಯ ಪಾವಿತ್ರತೆ ಕಾಪಾಡಲು ಜಿಲ್ಲಾ ಪಂಚಾಯತ್‍ನಲ್ಲಿ ಕೇಂದ್ರಿಕೃತ ವೀಕ್ಷಣಾ ಘಟಕ ಸ್ಥಾಪಿಸಿದ್ದು, ಅಧಿಕಾರಿ, ಸಿಬ್ಬಂದಿಗಳನ್ನೊಳಗೊಂಡ ನೋಡಲ್ ಅಧಿಕಾರಿಗಳು ಮತ್ತು ವೀಕ್ಷಕರ ತಂಡ ರಚಿಸಲಾಗುವುದು. ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಯಾವುದೂ ಇರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆ ನಡೆಯುವ ದಿನಗಳಂದು ನಿಯೋಜಿಸಬೇಕು ಎಂದರು.

ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಹಾಗೂ ಪರೀಕ್ಷಾ ಸುರಕ್ಷತಾ ದೃಷ್ಠಿಯಿಂದ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೊಳಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳನ್ನು ಕೋರಿದರು.

 ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ವೇಳಾಪಟ್ಟಿ: 

ಮೇ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಥಮ ಭಾಷೆ, ಮೇ 19ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ವಿಜ್ಞಾನ, ಮೇ 20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ದ್ವಿತೀಯ ಭಾಷೆ, ಮೇ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಗಣಿತ, ಮೇ 22ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ತೃತೀಯ ಭಾಷೆ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.15 ರವರೆಗೆ ಎನ್.ಎಸ್.ಕ್ಯೂ.ಎಫ್, ಮೇ 23ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಎರಡು ತಿಂಗಳ ಅಕ್ಕಿ ವಿತರಣೆ

ಸಭೆಯಲ್ಲಿ ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಚೇರಿ ಶಿಕ್ಷಣಾಧಿಕಾರಿ ಮಹಮದ್ ಇನಾಯತ್ ಉಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್, ಹೆಚ್.ಗಿರಿಜಾ, ಶ್ರೀನಿವಾಸ, ಸೈಯದ್ ಮೋಸಿನ್, ನಿರ್ಮಲಾ ದೇವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSSLC examಎಸ್‍ಎಸ್‍ಎಲ್‍ಸಿ ಪರೀಕ್ಷೆಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ ಆಚರಣೆ ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಬರ್ತ್ ಡೇ | ಕೇಕ್ ಕತ್ತರಿಸಿ ಸಂಭ್ರಮಿಸಿದ ಪಪ್ಪಿ 
Next Article ಸೂರ್ಯಕಾಂತಿ ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀಧಿ 
Leave a Comment

Leave a Reply Cancel reply

Your email address will not be published. Required fields are marked *

eyebrows
ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
Life Style
Neck crease
ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
Dina Bhavishya
ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up