CHITRADURGA NEWS | 23 MAY 2025
ಚಿತ್ರದುರ್ಗ: ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೇ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಸಂಬಂಧ ಜರುಗಿದ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಮಾರ್ಗದರ್ಶಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಂಡಳಿಯಿಂದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಸಂಗ್ರಹಿಸಿಡುವ ತಾಲೂಕು ಖಜಾನೆಗಳಲ್ಲಿ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆಯ ಪಾವಿತ್ರತೆ ಕಾಪಾಡಲು ವೆಬ್ ಕಾಸ್ಟಿಂಗ್ ಘಟಕ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.
28 ಪರೀಕ್ಷಾ ಕೇಂದ್ರ 7902 ವಿದ್ಯಾರ್ಥಿಗಳು: ಇದೇ ಮೇ.26ರಿಂದ ಜೂನ್ 02 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಯಲಿದೆ. ಮೇ.26ರಂದು ಪ್ರಥಮ ಭಾಷೆ, ಮೇ.27ರಂದು ಗಣಿತ, ಮೇ.28ರಂದು ಇಂಗ್ಲೀಷ್, ಮೇ.29ರಂದು ಸಮಾಜ ವಿಜ್ಞಾನ, ಮೇ.30ರಂದು ಹಿಂದಿ, ಮೇ.31ರಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.
Also Read: ಮೆಟ್ರಿಕ್ ನಂತರ ಮತ್ತು ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಎಸ್ಎಸ್ಎಲ್ಸಿ ಪರೀಕ್ಷೆ-2ಗೆ 7902 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 28 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್ನರವನ್ನು ನೇಮಕ ಮಾಡಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತ, ತಾಲ್ಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಬೇಕು. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
Also Read: ರೈತರ ಮಕ್ಕಳಿಗೆ ಉಚಿತ 10 ತಿಂಗಳು ತೋಟಗಾರಿಕೆ ತರಬೇತಿ | ಅರ್ಜಿ ಆಹ್ವಾನ
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಶಿಕ್ಷಣಾಧಿಕಾರಿ ಸಿದ್ದಪ್ಪ, ಡಿವೈಎಸ್ಪಿ ದಿನಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲಾ ತಾಲ್ಲೂಕುಗಳ ಬಿ.ಇ.ಓ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
