
CHITRADURGA NEWS | 29 MARCH 2025
ಚಿತ್ರದುರ್ಗ: ಮಾರ್ಚ್ 29ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1ರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 22,159 ವಿದ್ಯಾರ್ಥಿಗಳು ಹಾಜರಾಗಿದ್ದು, 957 ವಿದ್ಯಾರ್ಥಿಗಳು ಗೈರಾಗಿದ್ದಾರೆ.
Also Read: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ
ಜಿಲ್ಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ 23,116 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಚಳ್ಳಕೆರೆ ತಾಲ್ಲೂಕಿನಲ್ಲಿ 4,883 ವಿದ್ಯಾರ್ಥಿಗಳು, ಚಿತ್ರದುರ್ಗ-6,278, ಹಿರಿಯೂರು-3,384, ಹೊಳಲ್ಕೆರೆ-2,591, ಹೊಸದುರ್ಗ-2,846 ಹಾಗೂ ಮೊಳಕಾಲ್ಮುರು-2,177 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22,159 ವಿದ್ಯಾರ್ಥಿಗಳು ಹಾಜರಾಗಿ, 957 ವಿದ್ಯಾರ್ಥಿಗಳು ಗೈರಾಗಿದ್ದಾರೆ.
Also Read: ನಿವೃತ್ತ ASI ಟಿ.ಕೃಷ್ಣಪ್ಪ ನಿಧನ
ಜಿಲ್ಲೆಯ 82 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
