
CHITRADURGA NEWS | 22 MARCH 2024
ಚಿತ್ರದುರ್ಗ: ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಜಿಲ್ಲೆಯಾದ್ಯಂತ 78 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರದ ವ್ಯಾಪ್ತಿಯ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಚುನಾವಣಾ ಕರ್ತವ್ಯ ನಿರ್ಲಕ್ಷ್ಯ ಮೂವರು ಶಿಕ್ಷಕಿಯರು ಅಮಾನತು
ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್, ಇಂಟರ್‍ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಾಂಕಗಳಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳನ್ನು ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
