CHITRADURGA NEWS | 02 MAY 2025
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಐಸಿಎಸ್‌ಇ-2024-25ರ ಫಲಿತಾಂಶ ಪ್ರಕಟವಾಗಿದ್ದು, ಚೊಚ್ಚಲ ಬ್ಯಾಚಿನಲ್ಲೇ ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.
Also Read: ಕೇಂದ್ರದ ಜಾತಿ ಗಣತಿ ನಿರ್ಧಾರ ಸ್ವಾಗತಾರ್ಹ | ಎಚ್.ಆಂಜನೇಯ
ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಂದ (ಜೋನಲ್ ವಿಭಾಗದಲ್ಲಿ) ಹಾಗೂ ಜಿಲ್ಲೆಗೆ ಶಾಲೆಯು ಪ್ರಥಮ ಸ್ಥಾನ ತನ್ನ ಮೂಡಿಗೇರಿಸಿಕೊಂಡಿದ್ದು, ಶಾಲೆಯು ಶೇ. 100 ರಷ್ಟು ಫಲಿತಾಂಶ ಪಡೆದಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಶಾಲೆಯ ವಿದ್ಯಾರ್ಥಿ ಆರ್ಯನ್ ವೀರ್ ಶೇ.98 ರಷ್ಟು ಫಲಿತಾಂಶದೊಂದಿಗೆ ಝೋನಲ್ ಮಟ್ಟದಲ್ಲಿ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ನಂತರದಲ್ಲಿ ಜೀವನ್ ಸಿ ಗೌಡ ಶೇ.97 ಫಲಿತಾಂಶ ಪಡೆದುಕೊಂಡಿದ್ದಾನೆ.
ಒಟ್ಟಾರೆ 16 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 9 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.
Also Read: SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..
ವಿದ್ಯಾರ್ಥಿಗಳ ಸಾಧನೆಗೆ ಎಸ್ ಆರ್ ಎಸ್ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷ ಅಮೋಘ್ ಬಿ.ಎಲ್, ಆಡಳಿತಾಧಿಕಾರಿ ಡಾ.ರವಿ ಟಿ.ಎಸ್ , ಪ್ರಾಂಶುಪಾಲರಾದ ಅರ್ಪಿತ ಎಂ.ಎಸ್ ಹಾಗು ಬೋಧಕ ಸಿಬ್ಬಂದಿ ಅಭಿನಂದಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number