CHITRADURGA NEWS | 01 MAY 2026
ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.4 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ದುರ್ಗೋತ್ಸವ ಆಚರಿಸಲು ಒತ್ತಾಯಿಸಿ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಗೆ ಮನವಿ ಸಲ್ಲಿಕೆ
ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್, ಪಿಯುಸಿ, ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪದವಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಎಸ್.ಸಿ/ಎಸ್.ಟಿ/ಒ.ಬಿ.ಸಿ/ಇ.ಎಸ್.ಎಮ್ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ ಜೂನ್-2026 ಆಗಿದ್ದು, ನಿಖರ ದಿನಾಂಕವನ್ನು ಎಸ್‌ಎಸ್‌ಸಿ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕಾದಾಲತ್ | ಸದುಪಯೋಗ ಪಡೆದುಕೊಳ್ಳಿ | ನ್ಯಾ.ರೋಣ ವಾಸುದೇವ
ಹೆಚ್ಚಿನ ಮಾಹಿತಿಗಾಗಿ ಎಸ್‌ಎಸ್‌ಸಿ ವೆಬ್‌ಸೈಟ್ www.ssckkr.kar.nic.in/https://ssc.nic.in ಗೆ ಭೇಟಿ ನೀಡಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

