
CHITRADURGA NEWS | 13 SEPTEMBER 2025
ಚಿತ್ರದುರ್ಗ: ದೇಶದ ಗಮನ ಸೆಳೆದಿರುವ, ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಜನ ಸೇರುವ ಚಿತ್ರದುರ್ಗ ಹಿಂದೂ ಮಹಾಗಣತಿಯ ಹತ್ನೇತೊಂಬತ್ತನೇ ವರ್ಷದ ಶೋಭಾಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆಗೆ ಚಾಲನೆ ದೊರೆಯಿತು.
ಇದನ್ನೂ ಓದಿ: POP ಗಣೇಶ ನಿಷೇಧಿಸಿ | ನಮ್ಮ ಪರಂಪರೆಯಂತೆ ಮಣ್ಣಿನ ಗಣಪ ಪ್ರತಿಷ್ಠಾಪಿಸಿ | ಶಾಂತವೀರ ಶ್ರೀ

ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಿರುವ ಜೈನ ಧಾಮದ ಸಿಂಧೂರ ಮಂಟಪದ ತುಸು ದೂರದಲ್ಲಿ ಸ್ಟೇಡಿಯಂ ರಸ್ತೆ ಬಳಿ ನಿರ್ಮಿಸಿದ್ದ ವೇದಿಕೆ ಕಾರ್ಯಕ್ರಮದ ಬಳಿಕ ಶೋಭಾಯಾತ್ರೆಗೆ ಚಾಲನೆ ದೊರೆಯಿತು.
ಈ ವೇಳೆ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾದ ಶರಣ್ ಕುಮಾರ್, ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್, ಮುಖಂಡರಾದ ಟಿ.ಬದರೀನಾಥ್, ಕೇಶವ್, ಸಂದೀಪ್, ಅಶೋಕ್, ವಿಠಲ್ ಸೇರಿದಂತೆ ಸಾವಿರಾರು ಮಂದಿ ಜಮಾಯಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
