CHITRADURGA NEWS | 05 MARCH 2026
ಚಿತ್ರದುರ್ಗ: ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್….
17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

