CHITRADURGA NEWS | 08 MARCH 2026
ಚಿತ್ರದುರ್ಗ: ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ಆರನೆ ಗ್ಯಾರೆಂಟಿಯಾಗಿ ಗೌರವ ಧನ ಹೆಚ್ಚಿಸದೆ ರಾಜ್ಯದ ಮುಖ್ಯಮಂತ್ರಿ ಬಜೆಟ್‍ನಲ್ಲಿ ಸೀರೆ ಕೊಟ್ಟು ಅವಮಾನಿಸಿರುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಶಿರಸ್ತೆದಾರ್ ಮಂಜುನಾಥ್‍ರವರ ಮೂಲಕ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಸಮಿತಿ, ಎಐಟಿಯುಸಿ ಸಹಯೋಗದೊಂದಿಗೆ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರಾಜ್ಯ ಬಜೆಟ್‍ನಲ್ಲಿ ಹೆಚ್ಚು ಅನುದಾನ ಮೀಸಲಿಟ್ಟಿದೆಯೆ ವಿನಃ ಯಾವುದೇ ಜೀವನ ಭದ್ರೆತೆಯಿಲ್ಲದೆ ಹತ್ತಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ನಮಗೆ ಗೌರವ ಧನ ನೀಡದೆ ಸೀರೆ ಕೊಟ್ಟು ಕಾರ್ಮಿಕ ವಿರೋಧಿ ನೀತಿ ಅನುಸರಿಸಿದೆ.
ಸೀರೆಗಾಗಿ ಮೀಸಲಿಟ್ಟಿರುವ ಹಣವನ್ನು ಗೌರವ ಧನ ಹೆಚ್ಚಳಕ್ಕೆ ಬಳಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಒತ್ತಾಯಿಸಿದರು.
ಇದನ್ನೂ ಓದಿ: ಯುವ ಪೀಳಿಗೆಗೆ ಅಂಬೇಡ್ಕರ್ ವಿಚಾರಧಾರೆಗಳು ಸ್ಫೂರ್ತಿ | ಶಿವಣ್ಣ ಗಂಜಿಗಟ್ಟೆ
ಎಐಟಿಯುಸಿ ಜಿಲ್ಲಾಧ್ಯಕ್ಷೆ ಎಸ್.ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿ ಎಂ.ಸಾವಿತ್ರಮ್ಮ, ಖಜಾಂಚಿ ಪಿ.ಕೆ.ವಿನೋದಮ್ಮ, ಸತ್ಯಕೀರ್ತಿ, ಎನ್.ರಾಧಮ್ಮ, ಸುಮಿತ್ರಾಬಾಯಿ, ಕೆ.ಟಿ.ಸುಜಾತ, ಮಹೇಶ್ವರಿ, ಗೀತಾಂಜಲಿ, ಸಿ.ತಿಪ್ಪಮ್ಮ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
