
CHITRADURGA NEWS | 01 JANUARY 2026
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರಕಟಿಸಲಾಗಿರುವ ನೂತನ ವರ್ಷ 2026 ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಗುರುವಾರದಂದು ಬಿಡುಗಡೆ ಮಾಡಿದರು.
ಇದನ್ನೂ ಓದಿ: ಕೋಟೆ, ಆಡುಮಲ್ಲೇಶ್ವರದಲ್ಲಿ ಪ್ರವಾಸಿಗರ ದಂಡು | ಮುರುಘಾ ಮಠಕ್ಕೆ ಜನವೋ ಜನ | ಇಮ್ಮಡಿಯಾದ ಹೊಸ ವರ್ಷದ ಸಂಭ್ರಮ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2026 ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.
ಸರ್ಕಾರಿ ನೌಕರರು ನೂತನ ಕ್ಯಾಲೆಂಡರ್ ವರ್ಷದಲ್ಲಿ ಶ್ರದ್ಧೆ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು. ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಕೂಡ ಎಲ್ಲ ಸರ್ಕಾರಿ ನೌಕರರಿಗೆ ನೂತನ ವರ್ಷದ ಶುಭಾಶಯ ಕೋರಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 01 | ಹತ್ತಿ ರೇಟ್ ಎಷ್ಟಿದೆ?
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ರಮೇಶ್ ಸೇರಿದಂತೆ ಮಲ್ಲಿಕಾರ್ಜುನ್, ಶ್ರೀನಿವಾಸ್, ಬಾಗೇಶ್ ಉಗ್ರಾಣ ಹಾಗೂ ಸಂಘದ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
