CHITRADURGA NEWS | 03 AUGUST 2026
ಚಿತ್ರದುರ್ಗ: ರಾಜ್ಯ ಸರ್ಕಾರ 44 ಎ. ಕಾಯಿದೆಯನ್ನು ಹಿಂದಕ್ಕೆ ಪಡೆದು ನಮ್ಮನ್ನು ಕರೆಸಿ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಕ್ರಷರ್‍ಗಳನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆಂದು ಜಿಲ್ಲಾ ಕ್ವಾರೆ ಮತ್ತು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಸಿದರು.
ಇದನ್ನೂ ಓದಿ: ಪ್ರತಿದಿನ ಬೆಳಿಗ್ಗೆ 2 ಟೀ ಚಮಚ ಅಗಸೆಬೀಜ ತಿನ್ನಿ ಈ ಆರೋಗ್ಯ ಪ್ರಯೋಜನ ಪಡೆಯಿರಿ
ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಟ್ರಾಕ್ಟರ್ ಮತ್ತು ಕ್ರಷರ್ ಇಬ್ಬರ ಬಳಿಯೂ ಸರ್ಕಾರ ರಾಯಲ್ಟಿ ಸಂಗ್ರಹಿಸುತ್ತಿದೆ. ಇಂತಹ ದ್ವಿಮುಖ ನೀತಿಯಿಂದ ನಮಗೆ ನಷ್ಟವಾಗುತ್ತಿದೆ. 44 ಎ. ಕಾಯಿದೆಯನ್ನು ಸರ್ಕಾರ ಹಿಂದಕ್ಕೆ ಪಡೆದು ಒಂದೆ ನೀತಿ ಅನುಸರಿಸಲಿ.
ಆಂಧ್ರ, ತಮಿಳುನಾಡಿನಿಂದ ಇಲ್ಲಿಗೆ ಜೆಲ್ಲಿಗಳು ಬರುತ್ತಿವೆ. ಆದರೆ ಅವರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ತೆರಿಗೆ ಪಾವತಿಯಾಗುತ್ತಿಲ್ಲ. ಒಂದು ವರ್ಷದಿಂದ ಸರ್ಕಾರಕ್ಕೆ ನಮ್ಮ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುತ್ತಿದ್ದೇವೆ. ಇನ್ನು ನಾಲ್ಕೈದು ದಿನಗಳು ಕಾಯುತ್ತೇವೆ.
ನೂತನ ಸಚಿವರಿಗೂ ಮನವಿ ಅರ್ಪಿಸುತ್ತೇವೆ. ಸರ್ಕಾರಕ್ಕೆ ಸಂದಾಯವಾಗಬೇಕಾದ ರಾಯಲ್ಟಿ ಎಲ್ಲಾ ಹೋಗಿದೆ. ಆದರೂ ನಮಗೆ ಕಿರುಕುಳ ನಿಂತಿಲ್ಲ. ಸಾಲ ತೀರಿಸಲಾಗದೆ ರೈತ ಹೇಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೋ ಅದೇ ರೀತಿ ಕ್ರಷರ್‍ನವರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತದೆಂದು ಹೇಳಿದರು.
ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಜೀಪ್ ನೀಡಿದ ಎಂಎಲ್ಸಿ ಕೆ.ಎಸ್.ನವೀನ್
ಕಲ್ಲು ಗಣಿಗೆ ಸಂಬಂಧಿಸಿದಂತೆ ಡಿ.ಎಂ.ಜಿ. ಕಡೆಯಿಂದ ಪ್ರತಿ ವರ್ಷ ಆಡಿಟ್ ಆಗುತ್ತಿರುವುದರಿಂದ ಕೆ.ಇ.ಬಿ. ಬಿಲ್ ಪಾವತಿಸಿಕೊಳ್ಳುವುದನ್ನು ತಕ್ಷಣ ನಿಲ್ಲಿಸಬೇಕು. ಜಿ.ಎಸ್.ಟಿ. ರೂಲ್ಸ್ ಪ್ರಕಾರ ಐವತ್ತು ಸಾವಿರ ರೂ.ಗಳ ಒಳಗಡೆ ಜಿ.ಎಸ್.ಟಿ. ಬಿಲ್ ಇದ್ದರೆ ಈ-ವೇ ಬಿಲ್ ಅವಶ್ಯಕತೆಯಿರುವುದಿಲ್ಲ ಎಂದು ಕಾನೂನು ಹೇಳುತ್ತದೆ.
ಆದರೆ ಡಿ.ಎಂ.ಜಿ. ಇಲಾಖೆಯವರು ನಮ್ಮ ಸರಕು ಸಾಗಾಣಿಕೆ ಮಾಡುವ ಬಿಲ್ಲಿನ ಮೊತ್ತ ಎರಡು ಸಾವಿರ ರೂ.ಗಳಿಂದ ಹದಿನೈದು ಸಾವಿರ ರೂ. ಒಳಗಡೆಯಿರುತ್ತದೆ. ಈಗಿರುವಾಗ ಈ-ವೇ ಬಿಲ್‍ನ ಅಗತ್ಯವಿಲ್ಲ. ಆದ್ದರಿಂದ ಈ-ವೇ ಬಿಲ್ ಪದ್ದತಿಯನ್ನು ರದ್ದುಪಡಿಸುವಂತೆ ಅಬುಲ್ ಮಜೀದ್ ಸರ್ಕಾರವನ್ನು ಒತ್ತಾಯಿಸಿದರು.
ಸುರೇಶ್‍ಬಾಬು ಮಾತನಾಡಿ, ಹೊರ ರಾಜ್ಯದಿಂದ ಬರುವ ಜೆಲ್ಲಿಗೆ ನಮ್ಮ ರಾಜ್ಯ ಸರ್ಕಾರ ತೆರಿಗೆ ವಸೂಲಿ ಮಾಡುತ್ತಿಲ್ಲ. ನಮ್ಮ ಉದ್ದಿಮೆಯ ಮೇಲೆ ಸರ್ಕಾರ ಇಲ್ಲ ಸಲ್ಲದ ಕಾನೂನುಗಳನ್ನು ಜಾರಿಗೊಳಿಸಿ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್‍ಗಳಿಗೆ ದಂಡ ವಿಧಿಸುತ್ತಿರುವುದನ್ನು ತಕ್ಷಣವೆ ನಿಲ್ಲಿಸಬೇಕು. ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿಲ್ಲ. ಕಾನೂನು ಬದ್ದವಾಗಿ ಎಂ.ಡಿ.ಪಿ, ಜಿಎಸ್‍ಟಿ. ಮುಖಾಂತರ ಸರಕು ಪಡೆದು ಕ್ರಷಿಂಗ್ ಮಾಡಿ ಸಾಗಾಣಿಕೆ ಮಾಡುತ್ತಿದ್ದೇವೆಂದು ತಿಳಿಸಿದರು.
ಇದನ್ನೂ ಓದಿ: ಟಿ.ರಘುಮೂರ್ತಿ ಮಿನಿಸ್ಟರ್ | ಹ್ಯಾಟ್ರಿಕ್ ಗೆಲುವಿನ ಸರದಾರನಿಗೆ ಒಲಿದ ಮಂತ್ರಿ ಪಟ್ಟ
ಪತ್ರಿಕಾಗೋಷ್ಠಿಯಲ್ಲಿ ಮೆದೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿರಂಜನ್, ವೆಂಕಟೇಶ್, ಅಶೋಕ್‍ರೆಡ್ಡಿ, ಮಲ್ಲಿಕಾರ್ಜುನ್, ಅಭಿಷೇಕ್ ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

