CHITRADURGA NEWS | 31 JULY 2026
ಚಿತ್ರದುರ್ಗ: ವಿಶ್ವಕರ್ಮ ಸಮುದಾಯದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆ.6 ರಿಂದ 9 ರವರೆಗೆ ನಾಲ್ಕು ದಿನಗಳ ಕಾಲ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಎಂ.ಶಂಕರಮೂರ್ತಿ ತಿಳಿಸಿದರು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಸಮಾಜದಲ್ಲಿ ಸಂಘಟನೆಯ ಕೊರತೆಯಿರುವುದರಿಂದ ಕ್ರೀಡೆಯ ಮೂಲಕವಾದರೂ ವಿಶ್ವಕರ್ಮ ಸಮಾಜದವರು ಒಂದೆಡೆ ಸೇರಿ ಸಂಘಟಿತರಾಗಲಿ ಎನ್ನುವ ಉದ್ದೇಶದಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
2004, 2012 ರಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು. ಮೂರನೆ ರಾಜ್ಯ ಮಟ್ಟದ ಪಂದ್ಯಾವಳಿಯನ್ನು ವಿಜೃಂಭಣೆಯಿಂದ ನಡೆಸಲಾಗುವುದು. ಆ.8 ರಂದು ಸಂಜೆ ನಾಲ್ಕು ಗಂಟೆಗೆ ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿಂದ ತಂಡಗಳ ಮೆರವಣಿಗೆ ಹೊರಡಲಿದೆ ಎಂದರು.
ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಕಾರ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ವಿಶ್ವಕರ್ಮ ಸಮಾಜದವರನ್ನು ಸಂಘಟಿಸಲು ಕ್ರೀಡೆ ಒಂದು ಸಾಧನ. ಕಾಯಕ ಸಮಾಜ ನಮ್ಮದು. ಎಲ್ಲಾ ರಂಗಗಳಲ್ಲಿಯೂ ಯುವಕರ ಪಾಲ್ಗೊಳ್ಳುವಿಕೆ ಕಡಿಮೆಯಿದೆ. ಆಧುನಿಕ ಜೀವನ ಶೈಲಿಯಿಂದ ಪ್ರತಿಯೊಬ್ಬರು ಒತ್ತಡದಲ್ಲಿದ್ದಾರೆ. ಒಟ್ಟು ಹದಿನಾರು ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ ಎಂದು ಹೇಳಿದರು.
ಇದನ್ನೂ ಓದಿ: ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿಯ ಉಪಾಧ್ಯಕ್ಷ ಸತ್ಯನಾರಾಯಣಚಾರ್ ಮಾತನಾಡಿ, ಮಧ್ಯಕರ್ನಾಟಕದಲ್ಲಿರುವ ವಿಶ್ವಕರ್ಮ ಸಮಾಜದವರನ್ನು ಒಂದೆಡೆ ಸೇರಿಸಿ ಸಂಘಟನೆಯಾಗುವಂತೆ ಜಾಗೃತಿ ಮೂಡಿಸುವುದಕ್ಕಾಗಿ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ನಮ್ಮಲ್ಲಿ ಸಂಘಟನೆ ಕೊರತೆಯಿದೆ.
ಸ್ಪರ್ಧಾತ್ಮಕ ಯುಗವಾಗಿರುವುದರಿಂದ ನಾವುಗಳು ಕೂಡ ಒಗ್ಗಟ್ಟಾಗಿ ಶಕ್ತಿ ಪ್ರದರ್ಶಿಸಬೇಕಿದೆ. ವಿಶ್ವಕರ್ಮ ಕಲಾವಿದರು ಸಂಕಷ್ಟದಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಕಡೆಗಣಿಸುತ್ತಿವೆ. ಹಾಗಾಗಿ ನಾವುಗಳು ಒಗ್ಗಟ್ಟಾಬೇಕಿದೆ ಎಂದರು.
ಇದನ್ನೂ ಓದಿ: ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ್ ಎನ್, ಶ್ರೀನಿವಾಸ್, ವಿಶ್ವಕರ್ಮ ಸಮಾಜದ ಅಧ್ಯಕ್ಷ ಎ.ಶಂಕರಾಚಾರ್, ಎಸ್.ಶ್ರೀಧರಾಚಾರಿ, ಶ್ಯಾಂಪ್ರಸಾದ್, ಪ್ರದೀಪ್‍ಕುಮಾರ್ ಎಸ್, ಸಂಜಯ್ ಡಿ. ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

