Connect with us

    Maharishi Valmiki award; ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಆಯ್ಕೆ

    ಕಿಲಾರಿ ಜೋಗಯ್ಯ

    ಮುಖ್ಯ ಸುದ್ದಿ

    Maharishi Valmiki award; ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಆಯ್ಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 16 OCTOBER 2024

    ಚಿತ್ರದುರ್ಗ: 2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ(Maharishi Valmiki award) ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

    ಕ್ಲಿಕ್ ಮಾಡಿ ಓದಿ: CEIR Software: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

    ಬೆಂಗಳೂರು ವಿಭಾಗದಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಗಡ್ಡದಾರಹಟ್ಟಿಯ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಕಿಲಾರಿ ಜೋಗಯ್ಯ ಜಾನುವಾರುಗಳ ಸಂರಕ್ಷಣೆ ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ.

    ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ ಸಂಸ್ಕೃತಿಯ ಸಂರಕ್ಷಣೆ, ಜಾನುವಾರುಗಳ ಮಹತ್ವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಬುಡಕಟ್ಟು ಸಂಸ್ಕೃತಿಯ ಆಚರಣೆಯ ಮೂಲಕ ಜಾನುವಾರುಗಳ ಸಂತತಿಯ ಸಂರಕ್ಷಣೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮೀಣ ಸೊಗಡ ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದಾರೆ. ಇವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಕ್ಲಿಕ್ ಮಾಡಿ ಓದಿ: KSRTC ಬಸ್ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಮೃತ

    ಉಳಿದಂತೆ ಮೈಸೂರು ವಿಭಾಗದಿಂದ ಚಾಮರಾಜಪೇಟೆ ಮದ್ದೂರು ಗ್ರಾಮದ ಡಾ. ಎಸ್.ರತ್ನಮ್ಮ,‌ ಬೆಳಗಾವಿ ಗಾಂಧಿನಗರದ ವಿಭಾಗದಿಂದ ರಾಜಶೇಖರ ತಳವಾರ, ಬೆಂಗಳೂರು ಕೇಂದ್ರದಿಂದ ಕೆ. ಎಸ್.‌ ಮೃತ್ಯುಂಜಯ, ಕಲಬುರ್ಗಿ ವಿಭಾಗದಿಂದ ಹರಪನಹಳ್ಳಿಯ ರತ್ನಮ್ಮ ಬಿ. ಸೋಗಿ ಶ್ರೀ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಈ ಸಾಧಕರಿಗೆ ತಲಾ 20 ಗ್ರಾಮ ಬಂಗಾರದ ಪದಕ ಹಾಗೂ ಐದು ಲಕ್ಷ ರೂ. ನಗದು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡಲು ಕೆ. ಹೆಚ್.‌ಮ್ಲಲೇಶಪ್ಪ, ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

    ಕ್ಲಿಕ್ ಮಾಡಿ ಓದಿ: Darshan; ಕೊಲೆಯಾದ ರೇಣುಕಾಸ್ವಾಮಿಗೆ ಮಗು ಜನನ | ಕುಟುಂಬದಲ್ಲಿ ಸಂತಸ

    ಈ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಗಣ್ಯರನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top