
CHITRADURGA NEWS | 11 SEPTEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಅವೃತ್ತಿ ಪ್ರಥಮ ವರ್ಷದ B.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W., ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate ಕೋರ್ಸ್‍ಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ
ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2025ರ ಜುಲೈ 01 ರಿಂದ ಪ್ರಾರಂಭವಾಗಿರುತ್ತದೆ ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx] ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಬೇಕು.
ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 ನಿಂದಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಶೇ.50ಕ್ಕೂ ಹೆಚ್ಚಿನ ದೃಷ್ಠಿ ದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ | ಸೆ.12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 9738014893, 7204352581, 9008905457, 8310111244, 9972499704, 8277205613 ಗೆ ಕರೆ ಮಾಡುವುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
