By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ 

ಮುಖ್ಯ ಸುದ್ದಿ

ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ 

News Desk Chitradurga News
Last updated: 1 February 2025 09:37
News Desk Chitradurga News
5 months ago
Share
ಡಾ.ನಾಗಲಕ್ಷ್ಮೀ ಚೌಧರಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 FEBRUARY 2025

ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 05 ಮತ್ತು 06ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Also Read: ಬೆಳ್ಳಂ ಬೆಳಗ್ಗೆ ಬಿಸಿಎಂ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

 ಫೆ.05ರಂದು ಬೆಳಿಗ್ಗೆ 6ಕ್ಕೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪಿಳ್ಳೆಕೆರೆನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಬಾಪೂಜಿ ಸಮೂಹ ಸಭಾಂಗಣದಲ್ಲಿ ಏರ್ಪಡಿಸಿರುವ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸುವರು.

ಮಧ್ಯಾಹ್ನ 1ಕ್ಕೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಮಧ್ಯಾಹ್ನ 2ಕ್ಕೆ ಚಿತ್ರದುರ್ಗ ಜಿಲ್ಲೆಯ ತರಳಬಾಳು ರಸ್ತೆಯಲ್ಲಿರುವ ಚಿಕ್ಕಪುರ ಗೊಲ್ಲರಹಟ್ಟಿಗೆ ಭೇಟಿ ನೀಡುವುದು. ಸಂಜೆ 6ಕ್ಕೆ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠ ವತಿಯಿಂದ ವಾರ್ಷಿಕ ಮಹೋತ್ಸವದಲ್ಲಿ “ಮಹಿಳೆ ಮತ್ತು ಸಮಾಜ” ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ನಂತರ ರಾತ್ರಿ ಚಿತ್ರದುರ್ಗದಲ್ಲಿ ವಾಸ್ತವ್ಯ ಹೂಡುವರು.

 ಫೆ.06ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

Also Read: ಕುಂಭ ಮೇಳದಲ್ಲಿ ಚಿತ್ರದುರ್ಗ ಮೂಲದ ನಾಗಾಸಾಧು ನಿಧನ

ಎಸ್‍ಹೆಚ್‍ಡಬ್ಲ್ಯೂ ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ ಅಂಕಿ ಅಂಶಗಳೊಂದಿಗೆ ಚರ್ಚೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ರಿಸರ್ವೇಶನ್, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮದ ಬಗ್ಗೆ ಚರ್ಚೆ ನಡೆಸುವರು.

ಮಧ್ಯಾಹ್ನ 1ಕ್ಕೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 4.30ಕ್ಕೆ ಚಿತ್ರದುರ್ಗದಿಂದ ರೈಲಿನ ಮೂಲಕ ಹೊರಟು ರಾತ್ರಿ 9.30ಕ್ಕೆ ಬೆಂಗಳೂರು ತಲುಪುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga Updatesdistrict tourDr. Nagalakshmi ChaudharyKannada Latest NewsKannada NewsKarnatakaStateWomen's Commission Chairpersonಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರ್ನಾಟಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪ್ರವಾಸಡಾ.ನಾಗಲಕ್ಷ್ಮೀ ಚೌಧರಿಮಹಿಳಾ ಆಯೋಗದ ಅಧ್ಯಕ್ಷರುರಾಜ್ಯ
Share This Article
Facebook Email Print
Previous Article ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ | ಅರ್ಜಿ ಅಹ್ವಾನ 
Next Article ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ನಿರ್ದೇಶಕ ಎಸ್‌.ಜಿ.ಮಂಜುನಾಥ್ ನಿಧನ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up