ಮುಖ್ಯ ಸುದ್ದಿ
ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ
CHITRADURGA NEWS | 01 FEBRUARY 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 05 ಮತ್ತು 06ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
Also Read: ಬೆಳ್ಳಂ ಬೆಳಗ್ಗೆ ಬಿಸಿಎಂ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ
ಫೆ.05ರಂದು ಬೆಳಿಗ್ಗೆ 6ಕ್ಕೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪಿಳ್ಳೆಕೆರೆನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಬಾಪೂಜಿ ಸಮೂಹ ಸಭಾಂಗಣದಲ್ಲಿ ಏರ್ಪಡಿಸಿರುವ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸುವರು.
ಮಧ್ಯಾಹ್ನ 1ಕ್ಕೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಮಧ್ಯಾಹ್ನ 2ಕ್ಕೆ ಚಿತ್ರದುರ್ಗ ಜಿಲ್ಲೆಯ ತರಳಬಾಳು ರಸ್ತೆಯಲ್ಲಿರುವ ಚಿಕ್ಕಪುರ ಗೊಲ್ಲರಹಟ್ಟಿಗೆ ಭೇಟಿ ನೀಡುವುದು. ಸಂಜೆ 6ಕ್ಕೆ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠ ವತಿಯಿಂದ ವಾರ್ಷಿಕ ಮಹೋತ್ಸವದಲ್ಲಿ “ಮಹಿಳೆ ಮತ್ತು ಸಮಾಜ” ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ನಂತರ ರಾತ್ರಿ ಚಿತ್ರದುರ್ಗದಲ್ಲಿ ವಾಸ್ತವ್ಯ ಹೂಡುವರು.
ಫೆ.06ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
Also Read: ಕುಂಭ ಮೇಳದಲ್ಲಿ ಚಿತ್ರದುರ್ಗ ಮೂಲದ ನಾಗಾಸಾಧು ನಿಧನ
ಎಸ್‍ಹೆಚ್‍ಡಬ್ಲ್ಯೂ ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ ಅಂಕಿ ಅಂಶಗಳೊಂದಿಗೆ ಚರ್ಚೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ರಿಸರ್ವೇಶನ್, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮದ ಬಗ್ಗೆ ಚರ್ಚೆ ನಡೆಸುವರು.
ಮಧ್ಯಾಹ್ನ 1ಕ್ಕೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 4.30ಕ್ಕೆ ಚಿತ್ರದುರ್ಗದಿಂದ ರೈಲಿನ ಮೂಲಕ ಹೊರಟು ರಾತ್ರಿ 9.30ಕ್ಕೆ ಬೆಂಗಳೂರು ತಲುಪುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.