CHITRADURGA NEWS | 14 MAY 2025
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ CBSE ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಚಿತ್ರದುರ್ಗ ನಗರದ ದ ಸ್ಟೆಪ್ಪಿಂಗ್ ಸ್ಟೋನ್ (THE STEPPING STONE)ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ಸತತ 8 ವರ್ಷಗಳಿಂದ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಿದ್ದು, ಶಾಲೆಯ ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಕ್ಕಳಿಗೆ ಪಾದರಸದ ಮಟ್ಟ ಕಡಿಮೆ ಇರುವ ಈ 4 ಬಗೆಯ ಮೀನುಗಳನ್ನು ತಿನ್ನಿಸಿ
ಶಾಲೆಯ ವಿದ್ಯಾರ್ಥಿನಿಯರಾದ ಸೌಜನ್ಯ ಎನ್.ಕವಿರಾಜ್ ಶೇ.91 ಹಾಗೂ ರಕ್ಷಶ್ರೀ ಯು.ವಿ ಶೇ.89 ರಷ್ಟು ಫಲಿತಾಂಶ ದಾಖಲಿಸಿದ್ದಾರೆ
ಸ್ಟೆಪ್ಪಿಂಗ್ ಸ್ಟೋನ್ ಶಾಲೆಯಲ್ಲಿ ಸಿಬಿಎಸ್‌ಐ ಅಧ್ಯಯನ ಮಾಡುತ್ತಿದ್ದ 35 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಆಗಿದ್ದರೆ, 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಮೇ 13 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಇನ್ನೂ 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಎಂ.ಎ.ಸೇತುರಾಮ್, ಅಧ್ಯಕ್ಷೆ ಶ್ರೀಮತಿ ಎಸ್.ಸೀಮಾ, ಕಾರ್ಯದರ್ಶಿ ಎಸ್.ಹರ್ಷ ಹಾಗೂ ಪ್ರಾಚಾರ್ಯರಾದ ಶ್ವೇತಾ ಕಿರಣ್ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
