By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ
    6 minutes ago
    ಅರ್ಜಿ ಅಹ್ವಾನ
    ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    6 hours ago
    ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
    6 hours ago
    Municipal Council
    ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
    6 hours ago
    ಹಾಸನಾಂಬೆ ಜಾತ್ರೆಗೆ ಚಿತ್ರದುರ್ಗದಿಂದ ವಿಶೇಷ ಬಸ್ ಸೌಲಭ್ಯ
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 days ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 month ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    4 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 01 | ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ, ವಸ್ತ್ರಾಭರಣ ಖರೀಧಿ
    8 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 31 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 30 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 29 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ವಾಹನ ಪ್ರಯಾಣದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 month ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    4 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    2 days ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    3 days ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    3 days ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    4 days ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    4 days ago
Reading: ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ

chitradurganews.com
Last updated: 1 November 2026 15:32
chitradurganews.com
6 minutes ago
Share
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
SHARE

CHITRADURGA NEWS | 1 NOVEMBER 2026

ಚಿತ್ರದುರ್ಗ: ಚಿತ್ರದುರ್ಗ ಸೇರಿದಂತೆ ನಾಲ್ಕು ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ, ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು ತಲುಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.

ಇಲ್ಲಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿದರು.

ಇದನ್ನೂ ಓದಿ:ಚಿತ್ರದುರ್ಗ ಜಿಲ್ಲೆಯ 35 ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಈಗಾಗಲೇ 3 ಟಿಎಂಸಿ ನೀರು ಹರಿಸಲಾಗಿದ್ದು, ಶೀಘ್ರವೇ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ತೆಂಗು, ಅಡಿಕೆ ತೋಟಗಳು ಒಣಗಿ ರೈತರು ತೀವ್ರ ಆತಂಕದಲ್ಲಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿಸಲಾದ 3 ಟಿಎಂಸಿ ನೀರು ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕಿನ ಕೆಲವು ಕೆರೆಗಳನ್ನು ತಲುಪಿದೆ. ಆದರೆ ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕಿನ ಕೊನೆಯ ಭಾಗದ ಕೆರೆಗಳಿಗೆ ಇನ್ನೂ ನೀರು ತಲುಪಬೇಕಿದೆ. ಈ ಹಿನ್ನಲೆಯಲ್ಲಿ ತಕ್ಷಣವೇ 1 ಟಿಎಂಸಿ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿ, ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ನೀರು ಹರಿಯುವ ವಿಶ್ವಾಸವಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ

ಬೆಳೆದು ನಿಂತಿರುವ ತೋಟಗಳನ್ನು ಉಳಿಸಿಕೊಳ್ಳುವುದು ನಮಗೆ ಸವಾಲಾಗಿದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈತ ಮುಖಂಡರು ನಮ್ಮ ಜಿಲ್ಲೆಯ ಕುಡಿಯುವ ನೀರಿನ ಅಭಾವದ ಭೀಕರ ಪರಿಸ್ಥಿತಿ ಅರ್ಥೈಸಿಕೊಳ್ಳಬೇಕು ಸಚಿವರು ಮನವಿ ಮಾಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ  ಅನುಷ್ಠಾನದೊಂದಿಗೆ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಉದ್ಯೋಗ ಸೃಷ್ಠಿ ಹಾಗೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸನ್ನದ್ಧವಾಗಿದೆ. ರಾಜ್ಯದ 220ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈಗಾಗಲೇ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದು, ಕೇಂದ್ರ ಸರ್ಕಾರಕ್ಕೆ ರೂ.7148 ಕೋಟಿ ಪರಿಹಾರಧನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಬರ ಪರಿಹಾರಕ್ಕಾಗಿ ರೂ.227 ಕೋಟಿ ಅನುದಾನ ಕೋರಲಾಗಿದೆ. ಬರಹಿನ್ನಲೆಯಲ್ಲಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರು ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು: ಕನ್ನಡ ನಾಡು, ನುಡಿ ಹಾಗೂ ಸಂಸ್ಕøತಿಯನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ವಿಶಾಲ ಕರ್ನಾಟಕ ಏಕೀಕರಣಗೊಂಡಂತೆ, ಕನ್ನಡಿಗರ ಮನಸ್ಸುಗಳ ಏಕೀಕರಣವೂ ಆಗಬೇಕಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.

ಇದನ್ನೂ ಓದಿ:ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ

ನಾಡು-ನುಡಿಯ ಅಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆ ಹಾಗೂ ಸಂಸ್ಕøತಿಯನ್ನು ಮರೆಯಬಾರದು. ಹೆತ್ತ ತಾಯಿ ಮತ್ತು ಮಾತೃ ಭಾಷೆ ಕನ್ನಡ ನಮಗೆ ಎಂದಿಗೂ ಪೂಜನೀಯ. ಕನ್ನಡ ಉಳಿಸಿ, ಬೆಳೆಸಿ, ಪ್ರೀತಿಸುವ ಶಪಥವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.

ಇಡೀ ದೇಶದಲ್ಲಿಯೇ ಹಿಂದಿ ಭಾಷೆಯನ್ನು ಹೊರತುಪಡಿಸಿದರೆ, ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳು ಒಲಿದು ಬಂದಿರುವುದು ನಮ್ಮ ಹೆಮ್ಮೆಯ ಕನ್ನಡ ಭಾಷೆಗೆ ಮಾತ್ರ. ಇದು ನಮ್ಮ ಸಾಹಿತ್ಯ ಹಾಗೂ ಭಾಷೆಯ ಶ್ರೇಷ್ಠತೆಗೆ ಹಿಡಿದ ಕನ್ನಡಿಯಾಗಿದೆ. ನಾವು ಎಲ್ಲೇ ಇರಲಿ, ನಮ್ಮ ಮಾತೃಭಾಷೆಯಾದ ಕನ್ನಡವನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು ಎಂದರು.

ಇದನ್ನೂ ಓದಿ:ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ

ಮಕ್ಕಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಪೂರೈಸುವುದರಿಂದ ಉದ್ಯೋಗ ಹಾಗೂ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಯಾವುದೇ ಅಡ್ಡಿಯಾಗುವುದಿಲ್ಲ. ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಾಧನೆ ಮೆರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸನ್ಮಾನಿಸಿ ಗೌರವಿಸಿದರು.

ಇದನ್ನೂ ಓದಿ:ಹಾಸನಾಂಬೆ ಜಾತ್ರೆಗೆ ಚಿತ್ರದುರ್ಗದಿಂದ ವಿಶೇಷ ಬಸ್ ಸೌಲಭ್ಯ

ಚಿತ್ರದುರ್ಗ ನಗರದ ಸರ್ಕಾರಿ ಕೋಟೆ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು, ಮಹಾರಾಣಿ ಶಾಲಾ ವಿದ್ಯಾರ್ಥಿಗಳು ಹಾಗೂ ಗಾರ್ಡಿಯನ್ ಏಂಜಲ್ಸ್ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿ ಸಂಸ್ಕøತಿ ಹಾಗೂ ಮಹತ್ವ ಸಾರುವಂತಹ ಸಾಂಸ್ಕøತಿಕ  ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಶ್ರೀ ಭುವನೇಶ್ವರಿ ಭಾವಚಿತ್ರ ಹಾಗೂ ಕಲಾತಂಡಗಳು ಹಾಗೂ ಸ್ತಬದ್ಧಚಿತ್ರಗಳೊಂದಿಗೆ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ:ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಬೀಬೀ ಫಾತೀಮಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaKannada Latest Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಕನ್ನಡ ರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಆಚರಣೆ, Chitradurga, Chitradurga News, Kannada Rajyotsava, Kannada Rajyotsava celebration,
Share This Article
Facebook Email Print
Previous Article ಅರ್ಜಿ ಅಹ್ವಾನ ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Municipal Council
ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
ಮುಖ್ಯ ಸುದ್ದಿ
ಹಾಸನಾಂಬೆ ಜಾತ್ರೆಗೆ ಚಿತ್ರದುರ್ಗದಿಂದ ವಿಶೇಷ ಬಸ್ ಸೌಲಭ್ಯ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up