CHITRADURGA NEWS | 16 OCTOBER 2024
ಮೊಳಕಾಲ್ಮೂರು: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಅಮಾಯಕ ಬಾಲಕ ನಾಯಿಗಳ ಅಟ್ಟಹಾಸಕ್ಕೆ ಬಲಿಯಾದ ಭೀಕರ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ನಗರ ಸೇರಿದಂತೆ ಎಲ್ಲ ಪಟ್ಟಣ, ಪುರಸಭೆ, ಗ್ರಾಮ ಗ್ರಾಮಗಳಲ್ಲೂ ಹಿಂಡು ಹಿಂಡು ಬೀದಿ ನಾಯಿಗಳು ತಿರುಗಾಡಿದರೂ ನಿಯಂತ್ರಣ ಮಾಡಬೇಕಾದ ವ್ಯವಸ್ಥೆ ಮೀನಾಮೇಷ ಎಣಿಸುತ್ತಿದೆ. ಇದರ ಪರಿಣಾಮ ಓರ್ವ ಬಾಲಕ ನಾಯಿ ಕಡಿತದಿಂದ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಜಲಾಶಯಕ್ಕೆ 2426 ಕ್ಯೂಸೆಕಗ್ ಒಳಹರಿವು
ಐದಾರು ಬೀದಿ ನಾಯಿಗಳು ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಎಳೆಯ ಹುಡುಗನ ಮೇಲೆ ಏಕಾಏಕಿ ಮುಗಿಬಿದ್ದಿದ್ದು, ನಾಯಿ ಕಡಿತದಿಂದ ಪುಟ್ಟ ಕಂದ ಕೊನೆಯುಸಿರೆಳೆದಿದ್ದಾನೆ.
ಮೊಳಕಾಲ್ಮೂರು (Molakalmuru) ತಾಲೂಕಿನ ರಾಂಪುರ ಗ್ರಾಮದ ಚನ್ನಮಲ್ಲಿಕಾರ್ಜುನ ಎಂಬುವವರ ಮಗ ಹತ್ತು ವರ್ಷದ ಮಿಥುನ್ ಬೀದಿ ನಾಯಿಗಳ ದಾಳಿಗೆ ಬಲಿಯಾದ ಬಾಲಕ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ಶೇಂಗಾ ರೇಟ್ ಎಷ್ಟಿದೆ ?
ಕೋಚಿಂಗ್ ಸೆಂಟರ್‍ಗೆ ಹೋಗಿ ಸೈಕಲ್‍ನಲ್ಲಿ ಮನೆಗೆ ವಾಪಾಸು ಬರುವಾಗ ಬೀದಿ ನಾಯಿಗಳು ದಾಳಿ ಮಾಡಿವೆ.
ತಕ್ಷಣ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ತೆಗೆದುಕೊಂಡು ಹೋದರೂ, ಚಿಕಿತ್ಸೆ ಫಲಿಸದೆ ಬಾಲಕ ಮಿಥುನ್ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ರಾಂಪುರ ಪೊಲೀಸ್ ಠಾಣೆ ಪಿಎಸ್‍ಐ ಮಹೇಶ್ ಹೊಸಕೋಟೆ ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕೊಲೆಯಾದ ರೇಣುಕಸ್ವಾಮಿಗೆ ಮಗು ಜನನ | ಕುಟುಂಬದಲ್ಲಿ ಸಂತಸ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
