CHITRADURGA NEWS | 28 JULY 2026
ಚಿತ್ರದುರ್ಗ: ಮಾನಸಿಕ, ದೈಹಿಕ ಆರೋಗ್ಯಕ್ಕೆ ಒತ್ತಡ ರಹಿತ ಕೆಲಸ ಅಗತ್ಯ ಎಂದು ಜಿಲ್ಲಾ ಖಜಾನೆ ಉಪನಿರ್ದೇಶಕ ಹೆಚ್.ಟಿ.ಅಶೋಕ ಹೇಳಿದರು.
ಇದನ್ನೂ ಓದಿ: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಈಚೆಗೆ ಜಿಲ್ಲಾ ಖಜಾನೆ ಹಾಗೂ ಉಪ ಖಜಾನೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ‘ಒತ್ತಡ ನಿರ್ವಹಣೆ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ದೈನಂದಿನ ಚಟುವಟಿಕೆ ಹಾಗೂ ಕಚೇರಿ ಕೆಲಸಗಳಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ತಡೆದುಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಹೊರಬಂದು ಆರಾಮದಾಯಕವಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಅಳಗವಾಡಿ ಆಯುರ್ವೇದ ಚಿಕಿತ್ಸಾಲಯದ ಹಿರಿಯ ಆಯುಷ್ ಅಧಿಕಾರಿ ಜಿ.ಬಿ.ನಾರದಮುನಿ ಅವರು ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ಸಂದರ್ಭದಲ್ಲಿ ಜಿಲ್ಲಾ ಖಜಾನೆ ಇಲಾಖೆ ಸಹಾಯಕ ನಿರ್ದೇಶಕರಾದ ಎನ್. ಬೋರಯ್ಯ, ಎ.ಎಸ್. ಏಳುಕೋಟಿ, ಎ.ನರಸಿಂಹಮೂರ್ತಿ ಹಾಗೂ ಜಿಲ್ಲಾ ಖಜಾನೆ ಮತ್ತು ಉಪ ಖಜಾನೆಗಳ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

