CHITRADURGA NEWS | 20 JANUARY 2026
ಚಿತ್ರದುರ್ಗ: ಜಿಲ್ಲೆಯ ವಿವಿಧೆಡೆ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮವಾಗಿ ಕಳ್ಳ ಸಾಗಾಣಿಕೆಯಾಗುತ್ತಿದ್ದು, ಈ ಕುರಿತು ಆಹಾರ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಪ್ರಶ್ನಿಸಿದರು.
ಇದನ್ನೂ ಓದಿ: ಶೇ.80 ಕ್ಕೂ ಹೆಚ್ಚು ಹೆರಿಗೆ ಸಿಸೇರಿಯನ್ | ಸಚಿವರು, ಶಾಸಕರ ಕಳವಳ
ಬಡವರಿಗಾಗಿ ಸರ್ಕಾರ ನೀಡುತ್ತಿರುವ ಅಕ್ಕಿ ಈ ರೀತಿ ಅಕ್ರಮಗಳಿಗೆ ಬಳಕೆಯಾಗುತ್ತಿರುವ ಬಗ್ಗೆ ಅಧಿಕಾರಿಗಳು ಸುಮ್ಮನೆ ನೋಡಿಕೊಂಡು ಕೂರುವುದು ಸಮಂಜಸ ಅಲ್ಲ ಎಂದರು.
ಆಹಾರ ಇಲಾಖೆ ಉಪನಿರ್ದೇಶಕ ಶಿದ್ರಾಮ ಮಾರಿಹಾಳ ಅವರು, ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳು ತಮ್ಮ ಕುಟುಂಬಕ್ಕೆ ಬೇಕಾದ್ದಷ್ಟನ್ನು ಉಳಿಸಿಕೊಂಡು, ಹೆಚ್ಚುವರಿ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದು, ಇಂತಹ ಅಕ್ಕಿಯನ್ನು ಅಕ್ರಮ ಸಾಗಾಣಿಕೆಗೆ ಬಳಸುತ್ತಿರುವುದು ಕಂಡುಬರುತ್ತಿದೆ.
ಇದನ್ನೂ ಓದಿ: ಜಲಜೀವನ ಮಿಷನ್ | ಚಿತ್ರದುರ್ಗ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕಳಪೆ ಕಾಮಗಾರಿ
ಅಕ್ರಮದಲ್ಲಿ ಸಹಕರಿಸಿದ ಜಿಲ್ಲೆಯ 04 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಲಾಗಿದೆ. ಅಕ್ಕಿಯ ಜೊತೆಗೆ ತೊಗರಿ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿದಂತೆ ಇಂದಿರಾ ಕಿಟ್ ಅನ್ನು ಅನ್ನಭಾಗ್ಯ ಫಲಾನುಭವಿಗಳಿಗೆ ನೀಡುವ ಯೋಜನೆಗೆ ಸಿದ್ಧತೆ ನಡೆದಿದ್ದು, ಶೀಘ್ರದಲ್ಲೇ ಜಾರಿಯಾಗಲಿದೆ ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
