CHITRADURGA NEWS | 05 SEPTEMBER 2026
ಹೊಳಲ್ಕೆರೆ: ಸಾರ್ವಜನಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಸರ್ಕಾರದ ಪ್ರಜಾಸೇವಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ನಾಮಕಾವಸ್ಥೆಗೆ ಅರ್ಜಿಗಳನ್ನು ಸ್ವೀಕರಿಸಿ, ಸಬೂಬು ಹೇಳಿ ಸಾರ್ವಜನಿಕರನ್ನು ಕಚೇರಿಯಿಂದ ಕಳುಹಿಸಿದರೆ ಸಹಿಸುವುದಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಎಚ್ಚರಿಸಿದರು.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್
ತಾಲೂಕಿನ ರಾಮಗಿರಿಯಲ್ಲಿ ನಡೆದ ಸರ್ಕಾರದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸಮಸ್ಯೆಗಳನ್ನು ಹೊತ್ತು ಕಚೇರಿಗೆ ಬರುವ ಸಾರ್ವಜನಿಕರ ಕುಂದುಕೊರತೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕು. ಕೆಲ ಕುಟುಂಬಗಳಲ್ಲಿ ಹಿರಿಯರು ಸಂಪಾದಿಸಿರುವ ಆಸ್ತಿಗಾಗಿ ಕಲಹಗಳು ಉಂಟಾಗುತ್ತವೆ. ಇಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ, ಕುಟುಂಬದವರೊಂದಿಗೆ ಮಾತುಕತೆ ನಡೆಸಿ ರಾಜಿ ಮಾಡಿಸುವ ಮೂಲಕ ಆಸ್ತಿಯನ್ನು ಉಳಿಸಿಕೊಡುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಯೋಜನೆಯನ್ನು ಜಾರಿಗೆ ತಂದಿದ್ದು, ಯಾವುದೇ ಸರ್ಕಾರವಾಗಲಿ ಸಾರ್ವಜನಿಕರ ಸೇವೆಗಾಗಿ ಇರುತ್ತದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಾರಿಗೆ ತಂದಿರುವ ಯೋಜನೆ ಯಶಸ್ವಿಯಾಗಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಹಿತಾಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ
ಸಭೆಯಲ್ಲಿ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

