
CHITRADURGA NEWS | 17 APRIL 2026
ಚಿತ್ರದುರ್ಗ: ನಕಲಿ ವಿಕಲಚೇತನ ಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ವಂಚಿಸುವ ವ್ಯಕ್ತಿಗಳು ಮತ್ತು ಸುಳ್ಳು ಪ್ರಮಾಣಪತ್ರ ನೀಡಿದ ವೈದ್ಯರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೆಲವರು ವಿಕಲಚೇತನರಲ್ಲದಿದ್ದರೂ ನಕಲಿ ಪ್ರಮಾಣಪತ್ರಗಳನ್ನು ಪಡೆದು ಸರ್ಕಾರಿ ಸೌಲಭ್ಯಗಳು ಮತ್ತು ಉದ್ಯೋಗಗಳನ್ನು ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಉತ್ತರಿಸಿದ ಅಪರ ಜಿಲ್ಲಾಧಿಕಾರಿ, ವಿಕಲಚೇತನರ ಮೀಸಲಾತಿಯನ್ನು ಅರ್ಹರಲ್ಲದವರು ಕಿತ್ತುಕೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇಂತಹ ವಂಚನೆಗಳನ್ನು ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ.
ವಿಕಲಚೇತನರ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಡಳಿತ ಬದ್ಧವಾಗಿದೆ. ಯಾವುದೇ ಅಕ್ರಮಗಳು ಕಂಡುಬ0ದಲ್ಲಿ ಲಿಖಿತ ದೂರು ನೀಡಿದರೆ, ಸಂಶಯಾಸ್ಪದ ಪ್ರಕರಣಗಳಲ್ಲಿ ವಿಕಲಚೇತನ ಪ್ರಮಾಣ ಪತ್ರ ಪಡೆದವರನ್ನು ತಜ್ಞ ವೈದ್ಯರ ಸಮಿತಿಯಿಂದ ಮರು ತಪಾಸಣೆಗೆ ಒಳಪಡಿಸಲಾಗುವುದು. ಒಂದು ವೇಳೆ ಅಕ್ರಮ ನಡೆದಿರುವುದು ಕಂಡುಬ0ದರೆ, ಯಾವುದೇ ಮುಲಾಜು ತೋರದೆ ಕಠಿಣ ಕ್ರಮ ಕೈಗೊಳ್ಳೂವುದಾಗಿ ಹೇಳಿದರು.
ಇದನ್ನೂ ಓದಿ: ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ
ಸರ್ಕಾರದ ಸೌಲಭ್ಯಗಳ ಬಗ್ಗೆ ವಿಕಲಚೇತನರಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸುವ ಅಗತ್ಯವಿದೆ. ವಿಕಲಚೇತನರು ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯಬಾರದು. ಅವರ ಸಮಸ್ಯೆಗಳನ್ನು ಆಲಿಸಿ, ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗ ತಕ್ಷಣವೇ ಸೌಲಭ್ಯ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಇದರಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲಾಸ್ಪತ್ರೆಯಲ್ಲಿ ಯುಡಿಐಡಿ ಕಾರ್ಡ್ ಹಾಗೂ ಶ್ರವಣದೋಷ ಪ್ರಮಾಣಪತ್ರ ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿ, ಆಸ್ಪತ್ರೆಗಳಲ್ಲಿ ವಿಕಲಚೇತನರು ತಪಾಸಣೆಗಾಗಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು, ಅವರಿಗೆ ವಿಶೇಷ ಆದ್ಯತೆ ನೀಡಿ, ನಿಗದಿತ ಸಮಯದಲ್ಲಿ ತಪಾಸಣೆ ಪೂರ್ಣಗೊಳಿಸಿ ಪ್ರಮಾಣಪತ್ರ ನೀಡಬೇಕು. ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳು ಪ್ರತಿ 15 ದಿನಕ್ಕೊಮ್ಮೆ ವಿತರಣೆಯಾದ ಮತ್ತು ಅಪ್‌ಲೋಡ್ ಆದ ಕಾರ್ಡ್ಗಳ ಬಗ್ಗೆ ವರದಿ ನೀಡಬೇಕು ಎಂದು ಸೂಚಿಸಿದರು.
ವಿಕಲಚೇತನರ ಅನುದಾನ ಬಳಕೆಗೆ ನಿರ್ದೇಶನ:
ಗ್ರಾಮ ಪಂಚಾಯತಿಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿಕಲಚೇತನರಿಗಾಗಿ ಮೀಸಲಿರುವ 5% ಅನುದಾನ ಮತ್ತು ಯೋಜನೆಗಳ ವಿವರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ವಿಕಲಚೇತನರಿಗಾಗಿ ಮೀಸಲಿರುವ ಅನುದಾನದ ಬಳಕೆ ಮತ್ತು ಸೌಲಭ್ಯಗಳ ವಿತರಣೆಯಲ್ಲಿ ಆಗುತ್ತಿರುವ ಲೋಪದೋಷಗಳ ಸರಿಪಡಿಸಿಕೊಳ್ಳಬೇಕು. ಪಿಡಿಓಗಳು ವಿಕಲಚೇತರೊಂದಿಗೆ ಸಂಯಮದಿಂದ ವರ್ತಿಸಬೇಕು. ಸರಿಯಾದ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ನೀಡುವ ಅನುದಾನವು ಸಮರ್ಪಕವಾಗಿ ಅವರ ಕೈ ಸೇರಬೇಕು. ಯಾವುದೇ ಪಂಚಾಯತ್‌ಗಳು ಮಾಹಿತಿ ನೀಡಲು ನಿರಾಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಸಭೆಯಲ್ಲಿ ತಿಳಿಸಿದರು.
ಮಾಶಾಸನ ವಿಳಂಬ ಸರಿಪಡಿಸಲು ತಾಕೀತು:
ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಮಾಶಾಸನ ವಿಳಂಬವಾಗುತ್ತಿರುವ ಕುರಿತು ವಿಕಲಚೇತನರು ಸಭೆಯಲ್ಲಿ ಅಹವಾಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಂಬAದ ಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ವಾರದಲ್ಲಿ ಸಮಸ್ಯೆ ಪರಿಹರಿಸುವಂತೆ ತಾಕೀತು ಮಾಡಿದರು.
ಸರ್ಕಾರದ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪಬೇಕು. ಆಧಾರ್ ಕಾರ್ಡ್ನಲ್ಲಿ ವಯಸ್ಸು ತಿದ್ದುಪಡಿ ಮಾಡಿ ಪೆನ್ಷನ್ ಪಡೆಯುವ ಅಕ್ರಮಗಳಿಗೆ ಕಡಿವಾಣ ಹಾಕಲಾಗುತ್ತಿದೆ. ವಿಕಲಚೇತನರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ಬಗೆಹರಿಸಿಕೊಳ್ಳಬೇಕು. ಮಧ್ಯವರ್ತಿ ಅವಲಂಬಿಸಬಾರದು ಎಂದರು.
ಇದನ್ನೂ ಓದಿ: ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
ಕೆಎಸ್‌ಆರ್‌ಟಿಸಿ ಬಸ್ ಪಾಸ್ ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ರೂ.50 ಶುಲ್ಕ ನಿಗದಿ ಮಾಡಲಾಗಿದೆ. ಆದರೆ ಕೆಲವೆಡೆ ನೂರು ರೂಪಾಯಿ ಶುಲ್ಕವನ್ನು ಪಡೆಯುತ್ತಿದ್ದಾರೆ ಎಂದು ವಿಕಲಚೇತನರು ದೂರಿದರು.
ವಿಕಲಚೇತನರು ರೂ.50 ಕ್ಕಿಂತ ಹೆಚ್ಚು ಶುಲ್ಕವನ್ನು ಪಡೆಯುವ ಗ್ರಾಮ ಒನ್ ಕೇಂದ್ರಗಳ ಬಗ್ಗೆ ದೂರ ನೀಡಿದರೇ, ಕೂಡಲೇ ಅಂತಹ ಕೇಂದ್ರಗಳಿಗೆ ನೀಡಿರುವ ಲೈಸನ್ಸ್ ರದ್ದುಪಡಿಸುವುದಾಗಿ ಅಪರ ಜಿಲ್ಲಾಧಿಕಾರಿ ಹೇಳಿದರು.
ಇದೇ ವೇಳೆ ವಿಕಲಚೇತನರ ವಿದೊದ್ದೇಶ ಪುರ್ನವಸತಿ ಕಾರ್ಯಕರ್ತರ, ಫಲಾನುಭವಿಗಳ ಮನೆಗಳಿಗೆ ತೆರಳಿ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕು. ಯಾರಾದರು ವಿನಾಕಾರಣ ವಿಕಲಚೇತನರನ್ನು ಅಲೆದಾಡಿಸಿದರೇ, ಕೂಡಲೇ ವಿಕಲಚೇತನರ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿ, ಸಂಬಂಧಪಟ್ಟ ಅಧಿಕಾರಿ ಸೂಕ್ತ ಕ್ರಮ ಕೈಗೊಳ್ಳದಿದ್ದರೇ, ಅವರ ವಿರುದ್ದವೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಹೇಳಿದರು.
ಅತಿಥಿ ಶಿಕ್ಷಕಿ ಹುದ್ದೆ ಭರವಸೆ:
ಕನ್ನಡ ವಿಷಯದಲ್ಲಿ ಬಿ.ಎಡ್. ಪೂರ್ಣಗೊಳಿಸಿ ಶಿಕ್ಷಕ ಹುದ್ದೆ ನೇಮಕಾತಿ ಆಕಾಂಕ್ಷಿಯಾಗಿರುವ ಶಶಿಕಲ ಎನ್ನುವ ವಿಕಲಚೇತನೆ, ಯಾವುದಾರರು ಇಲಾಖೆಯಲ್ಲಿ ಹೊರಗುತ್ತಿಗೆ ಕೆಲಸ ನೀಡುವಂತೆ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಬುರುವ ಶೈಕ್ಷಣಿಕ ವರ್ಷದ ಆರಂಭದಲ್ಲಿ ಅತಿಥಿ ಶಿಕ್ಷಕಿ ಹುದ್ದೆಗೆ ಪರಿಗಣಿಸುವುದಾಗಿ ಭರವಸೆ ನೀಡಿದರು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 35,564 ವಿಕಲಚೇತನರಿಗೆ ಯುಡಿಐಡಿ ಕಾರ್ಡ್ಗಳನ್ನು ವಿತರಿಸಲಾಗಿದ್ದು, ಪ್ರಸ್ತುತ 2,666 ಅರ್ಜಿಗಳು ವೈದ್ಯಕೀಯ ಮಂಡಳಿಯ ಮುಂದೆ ಪರಿಶೀಲನೆಗಾಗಿ ಬಾಕಿ ಇವೆ. ಯುಡಿಐಡಿ ಕಾರ್ಡ್ ಪಡೆಯಲು ಕನಿಷ್ಠ ಶೇ. 40 ರಷ್ಟು ಅಂಗವೈಕಲ್ಯ ಇರುವುದು ಕಡ್ಡಾಯವಾಗಿದ್ದು. ಫಲಾನುಭವಿಗಳಿಗೆ ಕಾರ್ಡ್ ಹಸ್ತಾಂತರಿಸುವ ಮೊದಲೇ ಅವರ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.
ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಯುಡಿಐಡಿ ಕಾರ್ಡ್ಗೆ ಆಧಾರ್ ಕಡ್ಡಾಯಗೊಳಿಸಿರುವುದರಿಂದ ಒಬ್ಬ ವ್ಯಕ್ತಿ ಎರಡನೇ ಬಾರಿ ಕಾರ್ಡ್ ಪಡೆಯಲು ಸಾಧ್ಯವಿಲ್ಲ, ಇದು ಅಕ್ರಮಗಳನ್ನು ತಡೆಯಲು ಸಹಕಾರಿಯಾಗಿದೆ ಎಂದು ಜಿಲ್ಲಾ ವಿಕಲಚೇತನಾಧಿಕಾರಿ ಜೆ.ವೈಶಾಲಿ ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾಶಸ್ತçಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
