By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: CHILD MARRIAGE; ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ಕಠಿಣ ಕ್ರಮ | ಎಡಿಸಿ ಕುಮಾರಸ್ವಾಮಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » CHILD MARRIAGE; ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ಕಠಿಣ ಕ್ರಮ | ಎಡಿಸಿ ಕುಮಾರಸ್ವಾಮಿ 

ಮುಖ್ಯ ಸುದ್ದಿ

CHILD MARRIAGE; ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ಕಠಿಣ ಕ್ರಮ | ಎಡಿಸಿ ಕುಮಾರಸ್ವಾಮಿ 

News Desk Chitradurga News
Last updated: 20 July 2024 07:12
News Desk Chitradurga News
11 months ago
Share
ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ಕಠಿಣ ಕ್ರಮ | ಎಡಿಸಿ ಕುಮಾರಸ್ವಾಮಿ 
ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ಕಠಿಣ ಕ್ರಮ | ಎಡಿಸಿ ಕುಮಾರಸ್ವಾಮಿ 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 JULY 2024

ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ. ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬಾಲ್ಯ ವಿವಾಹ(CHILD MARRIAGE) ತಡೆಗಟ್ಟಲು ವಿಫಲವಾಗುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: FARMERS; ರೈತರಿಗೆ ಹೊರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಗ್ರಹ | ಆರ್.ಆರ್ ಸಂಖ್ಯೆಗೆ ಆಧಾರ್ ಜೋಡಣೆಗೆ ವಿರೋಧ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೆಲಸ ಮಾಡುತ್ತಾರೆ. ಇವರಿಗೆ ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಇರುತ್ತದೆ, ಆದರೂ ಜಾಣ ಕುರುಡುತನ ಪ್ರದರ್ಶಿಸುತ್ತಾರೆ. ಮೇಲ್ಮಟ್ಟದ ಅಧಿಕಾರಿಗಳು ಸಹ ಮೌನ ವಹಿಸುತ್ತಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಸಿಬ್ಬಂದಿಯ ನಿರ್ಲಿಪ್ತತೆ ಹಾಗೂ ಮೌನ, ಒಂದು ರೀತಿಯಲ್ಲಿ ಬಾಲ್ಯ ವಿವಾಹಕ್ಕೆ ಸಹಕಾರ ನೀಡಿದಂತೆ ಭಾಸವಾಗುತ್ತದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಂದಾಯ ಇಲಾಖೆಯಿಂದ ಬಾಲ್ಯ ವಿವಾಹ ತಡೆಗಟ್ಟಲು ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗುವುದು.

ಒಂದು ವೇಳೆ ಈ ತಂಡಗಳು ನೇರವಾಗಿ ಕಾರ್ಯಚಾರಣೆ ನಡೆಸಿ ಬಾಲ್ಯ ವಿವಾಹ ನಡೆಯುವುದನ್ನು ಪತ್ತೆ ಹಚ್ಚಿ, ಬಾಲ್ಯ ವಿವಾಹ ತಡೆದರೆ, ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮೇಲ್ವಿಚಾರಕರು ಹಾಗೂ ಸಿಡಿಪಿಓಗಳನ್ನು ಅಮಾನತು ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.

ಇದನ್ನೂ ಓದಿ: RAIN DAMAGE; ಮಳೆಗೆ ಕುಸಿದು ಬಿದ್ದ ಮನೆ | ಪ್ರಾಣಾಪಾಯದಿಂದ ಪಾರಾದ 5 ಜನ

ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಜೂನ್ ಅಂತ್ಯಕ್ಕೆ ಒಟ್ಟು 67 ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ದೂರುಗಳು ದಾಖಲಾಗಿದ್ದವು. ಈ ಪೈಕಿ 36 ಪಕರಣಗಳನ್ನು ತಡೆಗಟ್ಟಲಾಗಿದೆ. ಬಾಲ್ಯ ವಿವಾಹ ನಡೆದ 31 ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬಾಲ್ಯ ವಿವಾಹ ತಡೆಗಟ್ಟಲು ಕಾರ್ಯ ಯೋಜನೆ ರೂಪಿಸಲಾಗಿದ್ದು, ಶಾಲಾ ಶಿಕ್ಷಕರು, ಮುಖ್ಯೋಪಧ್ಯಾಯರಿಗೆ ತರಬೇತಿ ನೀಡಲಾಗಿದೆ. ಸಿಡಿಪಿಓ ಹಾಗೂ ಮೇಲ್ವಚಾರಕರು ಸಹ ಖುದ್ದು ಕಾಳಜಿ ವಹಿಸಿ ಬಾಲ್ಯ ವಿವಾಹಗಳನ್ನು ತಡೆಗಟ್ಟುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸಭೆಗೆ ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿಯೂ ಅಪ್ರಾಪ್ತ ಗರ್ಭಿಣಿ ಪತ್ತೆಗೆ ಸೂಚನೆ:

ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ತಾಯಿ ಕಾರ್ಡು ನೀಡುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಜನ್ಮ ದಿನಾಂಕವನ್ನು ಪರಿಶೀಲನೆ ಮಾಡಲಾಗುತ್ತಿದೆ. 18 ವರ್ಷಕ್ಕಿಂತ ಕಡಿಮೆ ಇರುವ ಬಾಲಕಿ ಗರ್ಭ ಧರಿಸಿದ ಪ್ರಕರಣ ಕಂಡು ಬಂದ ತಕ್ಷಣವೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಭಾರತಿ ಬಣಕಾರ್ ಹೇಳಿದರು.

ಇದನ್ನೂ ಓದಿ: SUBSIDY; ಹೈನುಗಾರಿಕೆ ಮಾಡಲು ರೈತ ಮಹಿಳೆಯರಿಗೆ ಸಹಾಯಧನ

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಾಗ ಜನ್ಮ ದಿನಾಂಕವನ್ನು ಧೃಡೀಕರಿಸಿಕೊಳ್ಳಬೇಕು. ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು ಪತ್ತೆಯಾದ ಕೂಡಲೇ ವರದಿ ಮಾಡುವಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿ ಪತ್ರ ಬರೆಯುವಂತೆ ಸೂಚಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್.ಎಸ್.ಕೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Actionadcchild marriageChitradurga newsFor officersKannada Latest NewstoughUnstoppableಅಧಿಕಾರಿಗಳಿಗೆಎಡಿಸಿಕಠಿಣಕನ್ನಡ ಲೇಟೆಸ್ಟ್ ನ್ಯೂಸ್ಕ್ರಮಚಿತ್ರದುರ್ಗ ನ್ಯೂಸ್ತಡೆಗಟ್ಟದಬಾಲ್ಯ ವಿವಾಹ
Share This Article
Facebook Email Print
Previous Article arecanut price list AdikeRate; ಅಡಿಕೆ ಧಾರಣೆ | ಜುಲೈ 19 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article ವಧು-ವರರ ಅನ್ವೇಷಣಾ ಸಮಾರಂಭ Silver Jubilee; ರಜತ ಮಹೋತ್ಸವ | ವಧು-ವರರ ಅನ್ವೇಷಣಾ ಸಮಾರಂಭ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up