By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC KS NAVEEN
    ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
    6 hours ago
    ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
    6 hours ago
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    6 hours ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    16 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    17 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    16 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    17 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    2 days ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    2 days ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    3 days ago
Reading: ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 

News Desk Chitradurga News
Last updated: 17 July 2026 19:25
News Desk Chitradurga News
3 months ago
Share
ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
SHARE

CHITRADURGA NEWS | 17 JULY 2026

ಚಿತ್ರದುರ್ಗ: ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆಗಳಲ್ಲಿನ ಶೌಚಾಲಯಗಳ ನಿರ್ಮಾಣ, ದುರಸ್ತಿ ಹಾಗೂ ನಿರ್ವಹಣೆ ಕೆಲಸವನ್ನು ಆಣೆಕಟ್ಟು ನಿರ್ಮಿಸುವಷ್ಟೇ ವಿಳಂಬವಾಗಿ ಮಾಡುತ್ತಿರುವುದು ಸರಿಯಲ್ಲ. ಕೇವಲ ಶೌಚಾಲಯ ಸರಿಪಡಿಸಲು ವರ್ಷಗಟ್ಟಲೆ ಕಾಯಬೇಕೇ ಎಂದು ಸಂಸದರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ವಿವಿಧ ಶಾಲೆಗಳು, ವಿವಿಧ ಸ್ಥಳಗಳಲ್ಲಿ ಒಟ್ಟು 3,866 ಶೌಚಾಲಯಗಳಿದ್ದು, ಅವುಗಳ ಪೈಕಿ ಬರೋಬ್ಬರಿ 1,140 ಶೌಚಾಲಯಗಳು ಬಂದ್ ಆಗಿವೆ. ಶೌಚಾಲಯಗಳ ದುರಸ್ತಿಗೆ ಹಣ ಬಿಡುಗಡೆಯಾಗಿದ್ದರೂ ಇಷ್ಟು ವರ್ಷಗಳ ಕಾಲ ವಿಳಂಬ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ತಾಂತ್ರಿಕ ಕಾರಣಗಳ ಮುಂದಿಟ್ಟುಕೊಂಡು ಮಕ್ಕಳ ಮೂಲ ಸೌಕರ್ಯಗಳನ್ನು ನಿರ್ಲಕ್ಷಿಸಬೇಡಿ. ಕೂಡಲೇ ಈ ಎಲ್ಲಾ 1,140 ಶೌಚಾಲಯಗಳನ್ನು ಸರಿಪಡಿಸಿ ಬಳಕೆಗೆ ಯೋಗ್ಯವಾಗಿಸಬೇಕು ಎಂದು ತಾಕೀತು ಮಾಡಿದರು ಎಂದು ತಾಕೀತು ಮಾಡಿದರು.

ಇದನ್ನೂ ಓದಿ: ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ

ಶಾಲಾಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಸಮಿತಿಗಳು (ಎಸ್‍ಡಿಎಂಸಿ) ಕೇವಲ ಅಧಿಕಾರ ತೋರಿಸಲು ಇರುವುದಲ್ಲ. ಶಾಲೆಯ ನಿರ್ವಹಣೆಗೆ ಕೈಜೋಡಿಸಬೇಕು. ಅವರು ಶಾಲೆಯ ನಿರ್ವಹಣೆಗೆ ಸಹಾಯ ಮಾಡಲು ಮುಂದಾಗಬೇಕು. ಶಾಲೆಗಳ ಶೈಕ್ಷಣಿಕ ವಾತಾವರಣ ಮತ್ತು ಮೂಲ ಸೌಕರ್ಯ ಸರಿಯಾಗಿರುವುದಂತೆ ನೋಡಿಕೊಳ್ಳುವುದು ಅವರ ಕರ್ತವ್ಯ ಎಂದರು.

ಶಾಲಾ ಶೌಚಾಲಯಗಳ ಸ್ವಚ್ಛತೆ ಹಾಗೂ ನಿರ್ವಹಣೆಗೆ ಪ್ರತಿ ಶಾಲೆ ವರ್ಷಕ್ಕೆ ರೂ.10 ಸಾವಿರ ಶಾಲಾನುದಾನ ನಿರ್ವಹಣೆಗೆ ನೀಡಲಾಗುತ್ತಿದೆ. ಆದರೆ ಈ ಹಣವನ್ನು ಎಷ್ಟು ಶಾಲೆಗಳ ಮುಖ್ಯ ಶಿಕ್ಷಕರು ಸರಿಯಾಗಿ ಬಳಕೆ ಮಾಡಿದ್ದಾರೆ ಎಂಬುದುದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳ ಸಂಪೂರ್ಣ ಮಾಹಿತಿ ಪಡೆದು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ನಿರ್ಲಕ್ಷಿಸಿದರೆ ಶಿಸ್ತು ಕ್ರಮ: ಕೇವಲ ಹವಾನಿಯಂತ್ರಿತ ಚೇಂಬರ್‍ಗಳಲ್ಲಿ ಕುಳಿತುಕೊಂಡರೆ ಜನರ ಸಮಸ್ಯೆಗಳು ಬಗೆಹರಿಯುವುದಿಲ್ಲ. ಅಧಿಕಾರಿಗಳು ಕಡ್ಡಾಯವಾಗಿ ವಾರ್ಡ್‍ಗಳು ಮತ್ತು ಹಳ್ಳಿಗಳಿಗೆ ಭೇಟಿ ನೀಡಿ, ಜನರ ಕುಡಿಯುವ ನೀರಿನ ಮತ್ತು ನೈರ್ಮಲ್ಯದ ಕಷ್ಟಗಳನ್ನು ಖುದ್ದಾಗಿ ಆಲಿಸಬೇಕು ಸಂಸದರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್

ಚಿತ್ರದುರ್ಗ ನಗರದಲ್ಲಿ ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ನೀವು ಕೊನೆಯದಾಗಿ 3ನೇ ವಾರ್ಡ್‍ಗೆ ಯಾವಾಗ ಭೇಟಿ ನೀಡಿದ್ದೀರಿ? ದಿನನಿತ್ಯ ಬೆಳಿಗ್ಗೆ ಬೇಗ ಎದ್ದು ವಾರ್ಡ್‍ಗಳಿಗೆ ಭೇಟಿ ನೀಡಿ ಕಸ ವಿಲೇವಾರಿ, ನೀರು ಸರಬರಾಜು ಮತ್ತು ನೈರ್ಮಲ್ಯದ ಸ್ಥಿತಿಗತಿಗಳ ಪರಿಶೀಲಿಸಬೇಕು ಎಂದು ನಗರಸಭೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು.

ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಮಹಿಳೆಯರು ನಡೆಸಿದ ‘ಖಾಲಿ ಕೊಡ ಪ್ರದರ್ಶನ’ ಪ್ರತಿಭಟನೆ ಪ್ರಸ್ತಾಪಿಸಿದ ಸಂಸದರು, ‘ಮಹಿಳೆಯರು ಕುಡಿಯುವ ನೀರಿಗಾಗಿ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಇಂತಹ ಬೇಜವಾಬ್ದಾರಿತನ ಸಹಿಸಲು ಸಾಧ್ಯವಿಲ್ಲ ಎಂದರು.

ದುಮ್ಮಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಬೋರ್‍ವೆಲ್‍ಗಳಲ್ಲಿ ನೀರಿನ ಇಳುವರಿ ಕಡಿಮೆಯಾಗಿದೆ. ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?

ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸಿ ಕ್ರಿಯಾ ಯೋಜನೆ ರೂಪಿಸಬೇಕು ಎಂದು ತಿಳಿಸಿದ ಅವರು, ಯಾವುದೇ ಕಾರಣಕ್ಖೂ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು. ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣವೇ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.  

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಜಿಲ್ಲೆಯ ಒಟ್ಟು 92 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ 216 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂದು ಅಂದಾಜಿಸಿ, ನಿರಂತರ ನಿಗಾ ಇಡಲಾಗಿತ್ತು. ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ತಾ.ಪಂ ಇಒ, ಆರ್‍ಡಬ್ಲ್ಯೂಎಸ್ ಎಇಇ ಹಾಗೂ ನೀರು ಸರಬರಾಜು ವಿಭಾಗದ ತಾಂತ್ರಿಕ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದು, ತೀವ್ರ ಸಮಸ್ಯೆ ಎದುರಾದ 49 ಜನವಸತಿ ಪ್ರದೇಶಗಳಲ್ಲಿ ಈಗಾಗಲೇ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ 12 ಜನವಸತಿಗಳಿಗೆ ಟ್ಯಾಂಕರ್ ಮೂಲಕ ಹಾಗೂ 37 ಜನವಸತಿ ಪ್ರದೇಶಗಳಿಗೆ ಖಾಸಗಿ ಬೋರ್‍ವೆಲ್‍ಗಳನ್ನು ಗುರುತಿಸಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಕೆಲವು ವಾರಗಳಿಂದ ಮಳೆ ಕೊರತೆಯಾಗಿದ್ದರೂ, ಸಂಸದರ ಮಧ್ಯಸ್ಥಿಕೆಯಿಂದ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ತುಂಗಭದ್ರಾ ನದಿ ನೀರು ಈಗ ಹರಿಯಲು ಆರಂಭಿಸಿದೆ. ಚಳ್ಳಕೆರೆ, ಮೊಳಕಾಲ್ಮೂರು ಮತ್ತು ಪಾವಗಡ ಭಾಗಗಳಿಗೆ ನೀರು ತಲುಪುತ್ತಿದ್ದು, ಸದ್ಯ ಅಲ್ಲಿ ಪರಿಸ್ಥಿತಿ ಸುಧಾರಿಸಿದೆ. ಚಿತ್ರದುರ್ಗ ತಾಲ್ಲೂಕಿನ ಕೆಲವು ಭಾಗ ಹಾಗೂ ಹಿರಿಯೂರು ಮತ್ತು ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಇಂದಿಗೂ ಕುಡಿಯುವ ನೀರಿನ ಸಮಸ್ಯೆ ಇದ್ದು, ಅದನ್ನು ಬಗೆಹರಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: SJM ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಕ್ಕೆ BA, B.Com ನಲ್ಲಿ ಉತ್ತಮ ಫಲಿತಾಂಶ 

ಆಗಸ್ಟ್ 15ಕ್ಕೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ: ಜಿಲ್ಲೆಯ ಹೊಸ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ನಿರ್ಮಾಣಕ್ಕೆ ಮುಂಬರುವ ಆಗಸ್ಟ್ 15ರಂದು ಸ್ವಾತಂತ್ರ್ಯದ ದಿನಾಚರಣೆಯಂದು ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಂಸದರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.

ಕೆಎಂಇಆರ್‍ಸಿಯ ಸಿಇಪಿಎಂಐಜಡ್ ಯೋಜನೆಯಡಿ ಜಿಲ್ಲೆಯ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಿಗೆ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 144 ಅಂಗನವಾಡಿ ಕೇಂದ್ರಗಳು ಮಂಜೂರಾಗಿದ್ದು, ಮಾದರಿ ಅಂಗನವಾಡಿ ಕಟ್ಟಡಗಳು-03, ಉನ್ನತೀಕರಣಕ್ಕೆ ಮಂಜೂರಾದ ಕೇಂದ್ರಗಳು 150 ಇದ್ದು, ಆಡಳಿತಾತ್ಮಕ ಮಂಜೂರಾದ ಈ ಕಾಮಗಾರಿಗಳಿಗೆ ಶೀಘ್ರವೇ ಟೆಂಡರ್ ಪ್ರಕ್ರಿಯೆ ನಡೆಸಿ, ಭೂಮಿ ಪೂಜೆ ನೆರವೇರಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಚಿತ್ರದುರ್ಗ ತಾಲ್ಲೂಕು ಮಠದ ಕುರುಬರಹಟ್ಟಿ ಗ್ರಾಮದ ಕರಡಿಗುಡ್ಡದ ಪ್ರದೇಶದ ವ್ಯಾಪ್ತಿಯಲ್ಲಿ 04 ಕಲ್ಲು ಗಣಿ ಗುತ್ತಿಗೆಗಳಿದ್ದು, ಇವು ಅವೈಜ್ಞಾನಿಕವಾಗಿರುವುದರಿಂದ ಕೂಡಲೇ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿಬಿ-ಜಿ ರಾಮ್ ಜಿ: ರಾಜ್ಯದ ಸರಾಸರಿಗಿಂತ ಜಿಲ್ಲೆ ಮುಂಚೂಣಿ: 

ಜುಲೈ 1ರಿಂದ ವಿಬಿ-ಜಿ ರಾಮ್ ಜಿ ಜಾರಿಗೆ ಬಂದಿದ್ದು, ಜಿಲ್ಲೆಯಲ್ಲಿ ಹೊಸ ವ್ಯವಸ್ಥೆಯನ್ವಯವೇ ಪ್ರಗತಿ ಸಾಧಿಸಲಾಗುತ್ತಿದೆ. ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ ಒಟ್ಟು 8,60,063 ಮಾನವ ದಿನಗಳ ಸೃಜನೆಯ ಗುರಿ ಹೊಂದಲಾಗಿದ್ದು, ಈ ಪೈಕಿ ಇದುವರೆಗೆ 3,87,000 ಮಾನವ ದಿನಗಳನ್ನು ಸೃಜಿಸಲಾಗಿದೆ. ರಾಜ್ಯದ ಸರಾಸರಿ ಪ್ರಗತಿ ಶೇ. 40 ರಷ್ಟಿದ್ದರೆ, ಚಿತ್ರದುರ್ಗ ಜಿಲ್ಲೆಯು ಶೇ. 45 ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯ ಸರಾಸರಿಗಿಂತ ಉತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ. ಬಾಬು ತಿಳಿಸಿದರು.

ಇದನ್ನೂ ಓದಿ: ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ | ಹೆಚ್ಚು ನೀರು ಕೇಳುವ ಬೆಳೆ ಹಾಕಬೇಡಿ | ಡಿಸಿ 

ಈ ಯೋಜನೆಯಡಿ ಜಿಲ್ಲೆಗೆ ಒಟ್ಟು ರೂ. 49.59 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ರೂ. 32 ಕೋಟಿ ವೆಚ್ಚ ಮಾಡಲಾಗಿದೆ. ಇಇಪಿ ಕೊನೆಯ ಹಂತದಲ್ಲಿ ರೂ.5.30 ಕೋಟಿ ಸೇರಿದಂತೆ ಒಟ್ಟು ರೂ.43 ಕೋಟಿ ವೆಚ್ಚದ ಸಲ್ಲಿಕೆಗೆ ಸಿದ್ಧಪಡಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಸುಮಾರು ರೂ. 5 ಕೋಟಿ ಅನುದಾನ ತಿರಸ್ಕøತಗೊಂಡಿದ್ದು ಇವುಗಳನ್ನು ಮತ್ತೊಮ್ಮೆ ಬಿಲ್ ಜನರೇಟ್ ಮಾಡುವ ಮೂಲಕ ತಾಂತ್ರಿಕ ಪ್ರಕ್ರಿಯೆ ಮುಗಿಸಿ ಖಜಾನೆಗೆ ಸಲ್ಲಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಬೆಳೆವಿಮೆಗೆ ಹೆಚ್ಚಿನ ರೈತರ ನೋಂದಣಿಗೆ ಕ್ರಮವಹಿಸಿ: ಮಳೆಯ ಅಭಾವದ ಹಿನ್ನೆಲೆಯಲ್ಲಿ ರೈತರ ನೆರವಿಗಾಗಿ ಬೆಳೆ ವಿಮೆ ಯೋಜನೆಗೆ ಕೊನೆಯ ದಿನಾಂಕ ಜುಲೈ 31 ರೊಳಗೆ ಹೆಚ್ಚಿನ ಪ್ರಮಾಣದಲ್ಲಿ ರೈತರನ್ನು ನೋಂದಾಯಿಸುವ ಅಗತ್ಯ ಕ್ರಮವಹಿಸಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ 24,072 ರೈತರು ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಡಿಸಿಸಿ ಬ್ಯಾಂಕ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿದ್ದು, ಬಿತ್ತನೆಯಾದ ಗರಿಷ್ಠ ಬೆಳೆಗಳಿಗೆ ವಿಮೆ ರಕ್ಷಣೆ ಕಲ್ಪಿಸಲು ಶ್ರಮಿಸಲಾಗುತ್ತಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ರೈತರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು.

ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಜಿಲ್ಲೆಯಲ್ಲಿ ಮೇ ಕೊನೆಯ ವಾರ ಹಾಗೂ ಜೂನ್ ಮೊದಲ ವಾರದಲ್ಲಿ ಉತ್ತಮ ಮಳೆಯಾಗಿದ್ದರೂ, ತದನಂತರ ಸುಮಾರು 30 ರಿಂದ 35 ದಿನಗಳ ಕಾಲ ಒಣ ಹವೆ ಮುಂದುವರಿದಿದ್ದರಿಂದ ಜಿಲ್ಲೆಯ ಕೃಷಿ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. 

ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಒಟ್ಟು 181.8 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಕೇವಲ 154 ಮಿ.ಮೀ ಮಳೆಯಾಗಿದ್ದು, ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಶೇ. -15 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯ ಒಟ್ಟು 22 ಹೋಬಳಿಗಳ ಪೈಕಿ 10 ಹೋಬಳಿಗಳಲ್ಲಿ ಮಳೆ ಕೊರತೆ ಎದ್ದು ಕಾಣುತ್ತಿದೆ. ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯವು ತೀವ್ರ ಹಿನ್ನಡೆ ಅನುಭವಿಸಿದೆ. 

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿಗೆ ಒಟ್ಟು 3,17,025 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ ಮಳೆಯ ಕೊರತೆಯಿಂದಾಗಿ ಇದುವರೆಗೆ ಕೇವಲ 59,555 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದರು.

ರಸಗೊಬ್ಬರ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಲಭ ಮತ್ತು ಪಾರದರ್ಶಕವಾಗಿಸಲು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ನೂತನ ‘ಫರ್ಟಿಲೈಸರ್ ಸೇಲ್ ಆಪ್’ ಮೂಲಕ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ. ಜೂನ್ 25 ರಂದು ಜಿಲ್ಲೆಯಲ್ಲಿ ಜಾರಿಗೆ ಬಂದ ಈ ಆಪ್ ಮೂಲಕ ಇದುವರೆಗೆ ಸುಮಾರು 43,000 ಕ್ಕೂ ಹೆಚ್ಚು ರೈತರಿಗೆ ಒಟ್ಟು 8,000 ಮೆಟ್ರಿಕ್ ಟನ್ ಗೊಬ್ಬರವನ್ನು ವಿತರಿಸಲಾಗಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಗೊಬ್ಬರದ ಕಾಳಸಂತೆ ತಡೆಗಟ್ಟಲು, ಅಕ್ರಮ ದಾಸ್ತಾನು ಹಾಗೂ ಗೊಬ್ಬರದ ಅತಿಯಾದ ಬಳಕೆ ನಿಯಂತ್ರಿಸಲು ಸಹಕಾರಿಯಾಗಿದೆ ಎಂದರು.  

ಇದನ್ನೂ ಓದಿ: ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಸಂತೋಷ್ ಗುಡಿಮಠ, ರಾಜಶೇಖರ್, ಲಕ್ಷ್ಮಣ, ವೆಂಕಟಲಕ್ಷ್ಮಿ, ಗೋವಿಂದಪ್ಪ, ಭರತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga News Disha SabhaGovinda Karajolಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ ದಿಶಾ ಸಭೆ
Share This Article
Facebook Email Print
Previous Article ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
Next Article ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಮಾತನಾಡಿದರು ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |
Leave a Comment

Leave a Reply Cancel reply

Your email address will not be published. Required fields are marked *

MLC KS NAVEEN
ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
ಮುಖ್ಯ ಸುದ್ದಿ
ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
ನಿಧನವಾರ್ತೆ
ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
ಮುಖ್ಯ ಸುದ್ದಿ
Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up