
CHITRADURGA NEWS | 10 OCTOBER 2024
ಚಿತ್ರದುರ್ಗ: ಡಿಸೆಂಬರ್ ತಿಂಗಳೊಳಗೆ ದುರ್ಗೋತ್ಸವ(Durgotsava) ಆಚರಣೆ ಮಾಡದೇ ಇದ್ದರೆ ನಮ್ಮ ಸಂಘಟನೆಯಿಂದ ಉಗ್ರವಾದ ಹೋರಾಟ ಮಾಡಲಾಗುವುದೆಂದು ಜಿಲ್ಲಾಡಳಿತಕ್ಕೆ ಕರುನಾಡ ವಿಜಯ ಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಹೇಳಿದರು.
ಕ್ಲಿಕ್ ಮಾಡಿ ಓದಿ: BJP; ಭ್ರಷ್ಟ ಸರ್ಕಾರ ಎಂಬ ಹಣೆಪಟ್ಟಿ ಮರೆ ಮಾಚಲು ಜಾತಿ ಗಣತಿ ಅಸ್ತ್ರ | ಸಿ.ಟಿ.ರವಿ


ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದುರ್ಗೋತ್ಸವ ಕಾರ್ಯಕ್ರಮ ನಡೆಸುವುದು ಜಿಲ್ಲೆಯ ಪ್ರತಿನಿಧಿಗಳಿಗೆ ಸ್ವಾಭಿಮಾನ ಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ಅಸಡ್ಡೆ ವರ್ತನೆ ತೋರಿಸುತ್ತಿದ್ದಾರೆ. ನಿನ್ನೆ ಕಿತ್ತೂರು ಉತ್ಸವದ ರಥಯಾತ್ರೆ ಜಿಲ್ಲೆಗೆ ಆಗಮಿಸಿದಾಗ ಜಿಲ್ಲಾಡಳಿತ ಸ್ವಾಗತಿಸಿ ಬೀಳ್ಕೊಡುಗೆ ಮಾಡಿದ್ದು ಸಂತೋಷದ ವಿಷಯ. ಆದರೆ ಜಿಲ್ಲೆಯ ದುರ್ಗೋತ್ಸವವನ್ನೇ ಮರೆತಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆ ಹೆಚ್.ಆಂಜನೇಯರವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ದುರ್ಗೋತ್ಸ ಕಾರ್ಯಕ್ರಮ ನಡೆದಿದ್ದು. ಅಲ್ಲಿಂದ ಇಲ್ಲಿಯವರೆಗೆ ನಡೆದೇ ಇಲ್ಲ. ನಾವು ಈ ಬಗ್ಗೆ ಹೋರಾಟ ಮಾಡಿ ಮನವಿಯನ್ನು ಸಲ್ಲಿಸಿದರು ಸಹ ಇಲ್ಲಿವರೆಗೂ ಯಾವುದೇ ಉತ್ತರ ಬಂದಿಲ್ಲ.
ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | 10 ಅಕ್ಟೋಬರ್ | ಇಂದಿನ ಹತ್ತಿ ರೇಟ್
ಕರ್ನಾಟಕ ಸರ್ಕಾರದಿಂದ ಮೈಸೂರು ದಸರಾ, ಹಂಪಿ ಉತ್ಸವ, ಕೊಡಗು ಉತ್ಸವ, ಕಿತ್ತೂರು ಉತ್ಸವ ಈ ರೀತಿ ಕೆಲವು ಜಿಲ್ಲೆಗಳಲ್ಲಿ ಇತಿಹಾಸವುಳ್ಳ ಹೆಸರುಗಳ ಮೇಲೆ ಉತ್ಸವಗಳು ಆಚರಿಸುತ್ತಾ ಬಂದಿರುತ್ತದೆ. ಆದರೆ ನಮ್ಮ ಚಿತ್ರದುರ್ಗ ಜಿಲ್ಲೆಯಲ್ಲಿನ ದುಗೋತ್ಸವವನ್ನು ಆಚರಣೆ ಮಾಡಲು ಮಾತ್ರ ಯಾವ ಚುನಾಯಿತ ಪ್ರತಿನಿಧಿಯೂ ಸಹಾ ಮುಂದೆ ಬಾರದಿರುವುದು ನಮ್ಮ ಜಿಲ್ಲೆಯ ದುರಂತವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಯಾವುದೇ ರೀತಿಯಲ್ಲಿ ಅಪಮಾನ. ಅವಮಾನ ಆಗುವುದಕ್ಕೆ ನಾವು ಬಿಡುವುದಿಲ್ಲ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ನಿಸಾರ್, ಅವಿನಾಶ್, ಮುಜಾವಿಲ್ಲಾ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
