
CHITRADURGA NEWS | 05 JUNE 2026
ಚಿತ್ರದುರ್ಗ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವೈದ್ಯಕೀಯ ಶಿಕ್ಷಣ ಪಡೆಯಬೇಕೆಂಬ ಆಸೆಯಿಟ್ಟುಕೊಂಡಿರುವ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ಇದರಿಂದ ಓದಿ ಮುಂದೆ ವೈದ್ಯರಾಗುವವರ ಕೈಗೆ ರೋಗಿಗಳು ಸಿಕ್ಕರೆ ಗತಿಯೇನು ಎಂದು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಡಿ.ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.?
ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನ ನೊಂದು ದೇಶದಲ್ಲಿ ಹದಿನೆಂಟು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ತಕ್ಷಣವೆ ರಾಜಿನಾಮೆ ಕೊಡಬೇಕು. ಸಿ.ಬಿ.ಎಸ್.ಇ.ನಲ್ಲೂ ಗೊಂದಲ ಉಂಟಾಗಿದೆ.
ಪ್ರಶ್ನೆ ಪತ್ರಿಕೆಗಳ ಸೋರಿಕೆಗೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಸಂಜೆ ಆರು ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಹೊರಟು ಒನಕೆ ಓಬವ್ವ ವೃತ್ತಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.
ನ್ಯಾಯವಾದಿ ಮಹಮದ್ ರಫಿ ಮಾತನಾಡಿ, ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಪರೀಕ್ಷೆ ಬರೆಯಲು ಶ್ರಮ ಪಟ್ಟು ಓದಿರುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿದ್ದಾರೆ. ಕೆಲವು ವಿದ್ಯಾರ್ಥಿಗಳು ಮತ್ತೆ ನೀಟ್ ಪರೀಕ್ಷೆ ಬರೆಯಬೇಕಾಗುತ್ತದೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಸ್ಪಕ್ಷಪಾತ ತನಿಖೆಯಾಗಬೇಕು. ಅತ್ಯಾಧುನಿಕ ಭದ್ರತೆ ಒದಗಿಸಿ ಮುಂದಿನ ದಿನಗಳಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
ಈ ವೇಳೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ಜಿಲ್ಲಾಧ್ಯಕ್ಷ ಕಿರಣ್ ಯಾದವ್ ಎ.ಟಿ, ಜಿ.ವಿ.ಮಧುಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದೂಸ್, ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಪ್ರಕಾಶ್‍ರಾಮನಾಯ್ಕ, ಹರ್ಷಿತ, ನ್ಯಾಯವಾದಿ ಶಶಾಂಕ್, ಚಾಂದ್‍ಪೀರ್, ನಾಗರಾಜ್ ಪೈಲೆಟ್ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
