CHITRADURGA NEWS | 05 JULY 2025
ಹಿರಿಯೂರು: ಧರ್ಮಪುರ(Darmapura) ಹೋಬಳಿಯಲ್ಲಿ ಕೋವಿಡ್ ಸಂಕಷ್ಟದ ನಂತರ ಬಸ್ ಸಂಚಾರ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸಗಳಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಕೆಲವು ಖಾಸಗಿ ಬಸ್ ಸಂಚಾರವನ್ನು ಮಾಲೀಕರು ನಿಲ್ಲಿಸಿದ್ದಾರೆ. ಇನ್ನು ಶಕ್ತಿ ಯೋಜನೆ ಆರಂಭದ ಬಳಿಕ ಖಾಸಗಿ ಬಸ್ ಅವಲಂಬಿಸುವವರೇ ಇಲ್ಲದಂತಾಗಿದೆ.

Also Read: BUS : ಬೈಕಿಗೆ ಬಸ್ ಡಿಕ್ಕಿ | ನಡು ರಸ್ತೆಯಲ್ಲೇ ಧಗ ಧಗನೆ ಉರಿದ ಬಸ್
ಪರಿಣಾಮ ಸರ್ಕಾರಿ ಬಸ್ ಪ್ರಯಾಣ ಪ್ರಯಾಸವಾಗಿದೆ. ಧರ್ಮಪುರ(Darmapura)ದಿಂದ-ಶಿರಾ ಮಾರ್ಗವಾಗಿ ತುಮಕೂರು ಮತ್ತು ಬೆಂಗಳೂರಿನತ್ತ ಸಂಚರಿಸಲು ಸರ್ಕಾರಿ ಬಸ್‌ನಲ್ಲಿ ಸೀಟ್ ಸಿಗುವುದಿರಲಿ, ಒಳಗಡೆ ಕಾಲಿಡಲೂ ಆಗದ ಸ್ಥಿತಿ ಇದೆ.
ನಿತ್ಯ ಬೆಳಿಗ್ಗೆ 4.30ಕ್ಕೆ ಪರಶುರಾಂಪುರದಿಂದ ಧರ್ಮಪುರಕ್ಕೆ ಬರುವ ಬಸ್ ಒಮ್ಮೊಮ್ಮೆ ನಿಲ್ಲಿಸದೇ ಹೋಗುತ್ತಾರೆ. ಇದರಿಂದ ಬೆಳಿಗ್ಗೆ ನಾಲ್ಕು ಗಂಟೆಗೇ ಸುತ್ತಮುತ್ತಲಿನ ಹಳ್ಳಿಗಳಿಂದ ಬಂದು ಕಾಯುವ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಹತಾಶೆಯಿಂದ ಊರಿಗೆ ಹಿಂತಿರುಗಬೇಕು. ನಂತರದ ಸಮಯದಲ್ಲಿ ಶಿರಾಕ್ಕೆ ಬಸ್ ಇದ್ದರೂ ಪ್ರಯಾಣಿಕರಿಂದ ತುಂಬಿಕೊಂಡು ನೇತಾಡುವ ದೃಶ್ಯ ಕಂಡುಬರುತ್ತದೆ ಎಂದು ವಿದ್ಯಾರ್ಥಿಗಳು(Students) ತಿಳಿಸುತ್ತಾರೆ.
ಬೆಳಿಗ್ಗೆ 9.30ಕ್ಕೆ ಧರ್ಮಪುರದಿಂದ ಬೆಂಗಳೂರಿಗೆ ಸಾರಿಗೆ ಸಂಸ್ಥೆಯ ಬಸ್ ಇದೆ. ನಿತ್ಯ ಕನಿಷ್ಠ 60 ರಿಂದ 70 ಪ್ರಯಾಣಿಕರು ಕಾಯುತ್ತಿರುತ್ತಾರೆ. ಇದರಿಂದ ಬಸ್ ಹತ್ತುವುದೇ ದುಸ್ತರ. ನೂಕು ನುಗ್ಗಲಿನ ಪರಿಸ್ಥಿತಿಯಿಂದ ಜೇಬು, ಚಿನ್ನದ ಸರ ಕಳವು ಪ್ರಕರಣಗಳು ನಡೆಯುತ್ತವೆ. ಬಸ್ ಹತ್ತುವಾಗ ಕಿಟಕಿ ಮತ್ತು ಚಾಲಕರ ಬಾಗಿಲಿನಿಂದ ಜನರು ಹತ್ತುವ ದೃಶ್ಯ ನಿತ್ಯ ಕಂಡುಬರುತ್ತದೆ.
Also Read: T.Raghumurthy: ತುರುವನೂರು | ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ
ರಾಜ್ಯ ಸರ್ಕಾರ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಬಸ್ ಸೇವೆಯನ್ನು ನೀಡಿರುವುದರಿಂದ ಆಗಿರುವ ಅನುಕೂಲಕ್ಕಿಂತ, ಅನಾನುಕೂಲಗಳೇ ಹೆಚ್ಚಾಗಿವೆ. ಪ್ರಮುಖವಾಗಿ ಬಸ್ ತುಂಬಾ ಜನ ಇರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಕೆಲವೆಡೆ ತುಂಬಿ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ಬಸ್ ನಿಂದ ಬಿದ್ದ ಘಟನೆ ಕೂಡ ನಡೆದಿವೆ. ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ, ಬಂದರೂ ಭರ್ತಿಯಾಗಿರುತ್ತವೆ. ಯಾವುದೇ ಸ್ಟಾಪ್ ನೀಡದೆ ಮುಂದೆ ಹೋಗುತ್ತಿವೆ.
ಫ್ರೀ ಬಸ್ ಯೋಜನೆ ಆದಾಗಿನಿಂದ ವಿದ್ಯಾರ್ಥಿಗಳು ಸೇರಿದಂತೆ ವಯೋವೃದ್ದರೂ, ಸಮಸ್ಯೆ ಗೀಡಾಗಿದ್ದಾರೆ.
ಪ್ರತಿನಿತ್ಯ ಬಸ್ಸುಗಳಲ್ಲಿ ನಡೆಯುತ್ತಿರುವ ಗಲಾಟೆಗಳು ಬಸ್ ಪ್ರಯಾಣಿಕರ ನೆಮ್ಮದಿಯನ್ನು ಕೆಡಿಸುತ್ತಿದೆ, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಕ್ಕಳು, ಬಸ್ ಹತ್ತಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.
ಹಿರಿಯೂರಿನಲ್ಲಿ ಡಿಪೋ ನಿರ್ಮಾಣವಾಗಿದೆ. ಆದರೆ, ಉದ್ಘಾಟನೆಯ ಭಾಗ್ಯ ಕಾಣದೇ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಮರೀಚಿಕೆಯಾಗಿಯೇ ಉಳಿದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
