CHITRADURGA NEWS | 18 OCTOBER 2026
ಚಿತ್ರದುರ್ಗ: ಸರ್ಕಾರಿ ವಿಜ್ಞಾನ ಕಾಲೇಜಿನ 2026-27ನೇ ಸಾಲಿನ ಪ್ರಥಮ, ತೃತೀಯ ಹಾಗೂ ಪಂಚಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
ಪ್ರತಿ ವರ್ಷ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆಗಳು ಡಿಸೆಂಬರ್ನಲ್ಲಿ ಆರಂಭವಾಗಿ ಜನವರಿಯಲ್ಲಿ ಮುಕ್ತಾಯವಾಗುತ್ತಿದ್ದವು. ಆದರೆ, ಈ ಬಾರಿ ನವೆಂಬರ್ ಎರಡನೇ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತಿದ್ದು, ನವೆಂಬರ್ 20ರಿಂದ ಥಿಯರಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಇನ್ನೂ ಪಠ್ಯಕ್ರಮ ಪೂರ್ಣಗೊಳ್ಳದಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ತೊಂದರೆಯಾಗುತ್ತಿದೆ. ಅದರಲ್ಲೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪಠ್ಯಕ್ರಮ ಹೆಚ್ಚಾಗಿರುವುದರಿಂದ ಪರೀಕ್ಷೆಯ ಒತ್ತಡ ಉಂಟಾಗಿದೆ. ನಿಗದಿತ ಸಮಯದಲ್ಲಿ ಪಠ್ಯಕ್ರಮ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಾಕಷ್ಟು ಸಮಯಾವಕಾಶ ಸಿಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆದ್ದರಿಂದ, ಹಿಂದಿನ ವರ್ಷಗಳಂತೆ ಡಿಸೆಂಬರ್ನಲ್ಲಿ ಪರೀಕ್ಷೆಗಳನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ಸಿದ್ಧತೆ ಮಾಡಿಕೊಳ್ಳಲು ಅಗತ್ಯ ಸಮಯಾವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
ಇದನ್ನೂ ಓದಿ: ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಕುಬೇರ್ ಯಾದವ್, ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ಅಮೂಲ್ಯ, ಚೈತನ್ಯ, ವೆಂಕಟೇಶ್, ವಂಶಿ ರೆಡ್ಡಿ, ವರುಣ್, ಅಜೇಯ್ ಪಾಟೀಲ್, ಮನು ಸೇರಿದಂತೆ ಇತರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

