CHITRADURGA NEWS | 09 JUNE 2025
ಮೊಳಕಾಲ್ಮೂರು: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸಂಘಟಿತರಾಗಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಉಮೇಶ್ ಜೀ ಹೇಳಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೊಳಕಾಲ್ಮೂರು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ನಗರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು,
ರಾಷ್ಟ್ರ ಕಟ್ಟುವಲ್ಲಿ ವಿದ್ಯಾರ್ಥಿಗಳು ಮುಂದೆ ಇರಬೇಕು, ಸಂಘಟಿತರಾಗಿ, ವಿದ್ಯಾರ್ಥಿಗಳು ನಾಳೆಯ ಪ್ರಜೆಯಲ್ಲ, ಇವತ್ತಿನ ಪ್ರಜೆಯಾಗಿ ಎಂದು ತಿಳಿಸಿದರು.
ಪ್ರತಿಷ್ಟಿತ ಶಾಲೆಯಲ್ಲಿ ಓದಿದರೆ ಮಾತ್ರ ಉನ್ನತ ಕೆಲಸ ಸಿಗುತ್ತದೆಂದು ಭಾವಿಸಿದ್ದಾರೆ. ಪ್ರತಿಯೊಂದಕ್ಕೂ ಶಿಕ್ಷಣವೇ ಮದ್ದು ಎಂಬುದನ್ನು ಸಾವಿತ್ರಿಬಾಯಿಫುಲೆ, ಅಂಬೇಡ್ಕರ್ ಅವರಂತಹ ಮಹನೀಯರು ತಿಳಿಸಿಕೊಟ್ಟಿದ್ದಾರೆ ಎಂದರು.
Also Read: ಮಕ್ಕಳಿಗೆ ಅಲೋವೆರಾ ಜ್ಯೂಸ್ ಕುಡಿಸುವುದು ಸುರಕ್ಷಿತವೇ?
ಎಬಿವಿಪಿ ಚಿತ್ರದುರ್ಗ ಜಿಲ್ಲಾ ಸಂಚಾಲಕ್ ಕನಕರಾಜ್ ಕೋಡಿಹಳ್ಳಿ, ಮಾತನಾಡಿ, ಎಬಿವಿಪಿಯು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸತ್ಥಜೆಯನ್ನಾಗಿಸಿ ದೇಶದ ಆಸ್ತಿಯನ್ನಾಗಿಸುವ ಕಾರ್ಯದಲ್ಲಿ ತೊಡಗಿರುವ ಸಂಘಟನೆಯಾಗಿದೆ. ವಿದ್ಯಾರ್ಥಿಗಳು ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಎಬಿವಿಪಿ ಕಾರ್ಯಕರ್ತರಾದ ಪ್ರೀತಮ್, ಸೂರ್ಯ ತೇಜು, ಅನಿಲ್, ಕನಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
