
CHITRADURGA NEWS | 08 December 2025
ಚಿತ್ರದುರ್ಗ: ಶಿಕ್ಷಕರು ಮಕ್ಕಳಿಗೆ ಪಠ್ಯ ವಿಷಯ ಬೋಧಿಸುವುದರ ಜತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಇದನ್ನೂ ಓದಿ: ಉದ್ದ ಜಿಗಿತ | ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಎಲ್.ಎಚ್.ಅಭಿ
ಶಾಲಾ ಶಿಕ್ಷಣ ಇಲಾಖೆ, ಮೈಸೂರು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಗದಗ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಾಚ್ಯಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಚಿತ್ರದುರ್ಗ ತಾಲೂಕಿನ ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಾದ ತನುಜ ಮತ್ತು ವಸುಂಧರ ಇವರಿಗೆ ಡಯಟ್‌ನಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಭಾಷಾ ಕೌಶಲ್ಯ, ಆತ್ಮವಿಶ್ವಾಸ, ಜ್ಞಾಪಕಶಕ್ತಿ ವೃದ್ಧಿಯಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸುಲಭವಾಗಿ ಯಶಸ್ಸು ಪಡೆಯಲು ಸಹಕಾರಿಯಾಗುತ್ತದೆ ಎಂದರು.
ಉಪ ಪ್ರಾಚಾರ್ಯ ಎಸ್.ನಾಗಭೂಷಣ್ ಮಾತನಾಡಿ, ಶಿಕ್ಷಕರು ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸಿದಾಗ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವಾಗುತ್ತದೆ. ಇಂದಿನ ಮಕ್ಕಳು ಇಂದಿನ ಪ್ರಜೆಗಳಾಗಿದ್ದು ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಇಲಾಖೆಯಿಂದ ನಡೆಸುವ ಸ್ಪರ್ಧಾ ಚಟುವಟಿಕೆಗಳಲ್ಲಿ ತೊಡಗಿಸಬೇಕು ಇದರಿಂದ ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಯುತ್ತದೆ. ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ: ಪೋಲಿಯೊ ಲಸಿಕೆಯಿಂದ ಮಕ್ಕಳು ವಂಚಿತರಾಗದಿರಲಿ | ADC ಬಿ.ಟಿ.ಕುಮಾರಸ್ವಾಮಿ
ಹಿರಿಯ ಉಪನ್ಯಾಸಕ ತಿಪ್ಪೇಸ್ವಾಮಿ, ಉಪನ್ಯಾಸಕರಾದ ಎಸ್.ಬಸವರಾಜು, ಪದ್ಮ, ರಾಮಣ್ಣ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ, ಮಾರ್ಗದರ್ಶಿ ಶಿಕ್ಷಕ ಟಿ.ಎಂ.ಮಲ್ಲಿಕಾರ್ಜುನಸ್ವಾಮಿ ಹಾಲೇಶ್, ನಿಜಗುಣಮೂರ್ತಿ, ವರಲಕ್ಷ್ಮಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

