CHITRADURGA NEWS | 07 APRIL 2026
ಚಿತ್ರದುರ್ಗ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನ ಸನ್ಮಾರ್ಗದಡೆಗೆ ಕೊಂಡೊಯ್ಯುವ ಕೆಲಸವನ್ನು ಶಿಕ್ಷಕರು ತಮ್ಮ ವೃತ್ತಿ ಬದುಕಿನಲ್ಲಿ ಮಾಡುತ್ತಿದ್ದಾರೆ ಇಂತಹ ಶಿಕ್ಷಕರಿಗೆ ನಾನು ಅನಂತವಾಗಿ ಆಭಾರಿಯಾಗಿರುತ್ತೇನೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದರು.
ಇದನ್ನೂ ಓದಿ: 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
ತಾಲೂಕಿನ ದೊಡ್ಡಸಿದ್ದವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳಿಂದ ನಿರ್ಮಿತವಾಗುತ್ತಿರುವ ಸಭಾಭವನ ಭೂಮಿಪೂಜೆ ನೆರವೇರಿಸಿ ಮಾತನಾಡಿದರು,
ಮಕ್ಕಳಿಗೆ ಮನೆಯಲ್ಲಿ ತಾಯಿಯೇ ಮೊದಲ ಶಿಕ್ಷಕಿ ನಂತರದ ಜೀವನದ ವೃತ್ತಿಯಲ್ಲಿ ಶಿಕ್ಷಕರು ಅತ್ಯಂತ ಪ್ರಮುಖರಾಗಿದ್ದಾರೆ. ಶಿಕ್ಷಕರು ಅದೆಷ್ಟ ವಿದ್ಯಾರ್ಥಿಗಳಿಗೆ ಅಕ್ಷರ ದಾನ ಮಾಡುವುದರ ಜ್ಞಾನದ ಸಂಪತ್ತನ್ನ ಬಿತ್ತುತ್ತಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದಂತಹ ಅದೆಷ್ಟೋ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಗಳಲ್ಲಿ ಇದ್ದಾರೆ, ಶಾಲಾ-ಕಾಲೇಜುಗಳ ಹಂತದಲ್ಲಿ ವಿದ್ಯಾರ್ಥಿಗಳಿಗೆ ತಿದ್ದಿ ಬುದ್ದಿ ಹೇಳಿ ಸನ್ಮಾರ್ಗದಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವಲ್ಲಿ ಸಾಕಷ್ಟು ಪಾತ್ರವನ್ನು ಶಿಕ್ಷಕರು ವಹಿಸಿದ್ದಾರೆ.
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತೊಡಗಿಕೊಳ್ಳಬೇಕೆನ್ನುವುದು ಸಹ ಮನದಟ್ಟಾಗುವ ರೀತಿಯಲ್ಲಿ ಶಿಕ್ಷಕರು ಬೋಧಿಸುತ್ತಿದ್ದಾರೆ ಇಂತಹ ಶಿಕ್ಷಕರೊಂದಿಗೆ ನಾನು ಯಾವಾಗಲೂ ಸದಾ ಜೊತೆಗಿರುವೆ ಎಂದು ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
ದೊಡ್ಡ ಸಿದ್ದವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ್ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದೇವೆ.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಗತ್ಯವಾಗಿ ಬೇಕಿರುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು ಶಾಸಕರ ಸ್ಪಂದಿಸಿ ಪಿಡಬ್ಲ್ಯೂಡಿ ಇಲಾಖೆಯಿಂದ ಶಾಲೆಗೆ ನಾಲಕ್ಕು ಕೊಠಡಿಗಳನ್ನು ಮಂಜೂರು ಮಾಡಿಕೊಡಲಾಗುವುದು ಎಂದು ಸ್ಥಳದಲ್ಲೇ ತಿಳಿಸಿದರು.
ಇದನ್ನೂ ಓದಿ: ಮರಗಳನ್ನು ಕಡಿದು ಕಟ್ಟಡ ಕಟ್ಟಲು ಬಿಡುವುದಿಲ್ಲ | MLC ಕೆ.ಎಸ್.ನವೀನ್ ಎಚ್ಚರಿಕೆ
ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದೇವರಾಜ್ ರೆಡ್ಡಿ, ನಗರ ಹಾಗು ಗ್ರಾಮಾಂತರ ಯೋಜನೆ ಇಲಾಖೆ ನಿವೃತ್ತ ನಿರ್ದೇಶಕರಾದ ಧನಂಜಯ ರೆಡ್ಡಿ, ವೆಂಕಟೇಶ ರೆಡ್ಡಿ, ಆರತಿ ಮಹಡಿ ಶಿವಮೂರ್ತಿ, ಲಿಂಗಬಸಪ್ಪ, ತಿಪ್ಪೇಸ್ವಾಮಿ, ಡಾ.ಸಿ.ಎಲ್.ಶಿವಮೂರ್ತಿ, ಗುರುಮೂರ್ತಿ, ಕೃಷ್ಣಮೂರ್ತಿ, ಶ್ರೀನಿವಾಸ ರೆಡ್ಡಿ, ಬಾಬುರೆಡ್ಡಿ, ವರಲಕ್ಷ್ಮಿ, ಮಲ್ಲಿಕಾರ್ಜುನ್, ಸುರೇಶ ರೆಡ್ಡಿ, ಉಜೀರಪ್ಪ ಹಾಗೂ ಇತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
