ಕ್ರೈಂ ಸುದ್ದಿ
ಮಕ್ಕಳು ಸೇವಿಸಿದ ಆಹಾರದ ಪರೀಕ್ಷೆಗೆ ರವಾನೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾಹಿತಿ
ಚಿತ್ರದುರ್ಗ ನ್ಯೂಸ್.ಕಾಂ: ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥರಾದ ವಿಷಯ ತಿಳಿಯುತ್ತಿದ್ದಂತೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಜಿಲ್ಲಾ ಆಸ್ಪತ್ರೆಗೆ ತೆರಳಿ ಮಕ್ಕಳ ಆರೋಗ್ಯ ವಿಚಾರಿಸಿದರು.
ನಗರದ ಬಿಇಒ ಕಚೇರಿ ಪಕ್ಕದಲ್ಲಿರುವ ಉರ್ದು ಶಾಲೆಯ 24 ಹಾಗೂ ಮೌಲಾನಾ ಆಜಾದ್ ಶಾಲೆಯ 3 ಮಕ್ಕಳು ಸೇರಿದಂತೆ ಒಟ್ಟು 27 ಮಕ್ಕಳು ಜಿಲ್ಲಾ ಆಸ್ಪತೆಗೆ ದಾಖಲಾಗಿದ್ದರು.
ಮಂಗಳವಾರ ಮಧ್ಯಾಹ್ನ ಬಿಸಿಯೂಟ
ಸೇವಿಸಿದ ಮಕ್ಕಳು ಶೇಂಗಾ ಚಿಕ್ಕಿ ತಿಂದಿದ್ದು, 3.30 ರಿಂದ 4 ಗಂಟೆ ವೇಳೆಗೆ ವಾಂತಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಊಟ ಹಾಗೂ ಶೇಂಗಾ ಚಿಕ್ಕಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಬಿಸಿಯೂಟ ಸೇವನೆ ಬಳಿಕ ಮಕ್ಕಳು ಅಸ್ವಸ್ಥ | ಆಸ್ಪತ್ರೆಗೆ ದಾಖಲು
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಈ ಮಧ್ಯಾಹ್ನ 12.30ಕ್ಕೆ ಊಟ ಮಾಡಿದ್ದಾರೆ. 3.30 ರಿಂದ 4 ಗಂಟೆ ವೇಳೆಗೆ ಮಕ್ಕಳಲ್ಲಿ ವಾಂತಿ ಆಗಿ, ಅಸ್ವಸ್ಥತೆ ಕಂಡು ಬಂದಿದೆ. ಯಾವ ಕಾರಣಕ್ಕೆ ಘಟನೆ ನಡೆದಿದೆ ಎನ್ನುವುದನ್ನು ಆಹಾರದ ಪರೀಕ್ಷೆಯಿಂದ ತಿಳಿಯಬೇಕಿದ್ದು, ವೈದ್ಯರು ಪರೀಕ್ಷೆಗೆ ಕಳಿಸಿದ್ದಾರೆ. ಎಲ್ಲ ಮಕ್ಕಳಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಆಸ್ಪತ್ರೆಗೆ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ, ಬಿಇಒ ನಾಗಭೂಷಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮತ್ತಿತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/DBdpIl5D3JYHFoKkhA0cQg)