
CHITRADURGA NEWS | 02 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಕೈಗೊಂಡಿರುವ ಪೂರ್ಣಗೊಂಡಿರುವ ಹಾಗೂ ಬಾಕಿ ಇರುವ ಡಿವೈಡರ್‍ಗಳ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಲೋಕೋಪಯೋಗಿ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಇದನ್ನೂ ಓದಿ: ಹೆದ್ದಾರಿ ರಿಪೇರಿ ಇದ್ದರೂ ಟೋಲ್ ಸಂಗ್ರಹ ಯಾಕೆ | ಡಿಸಿ ಅಸಮಾಧಾನ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುರುವನೂರು ರಸ್ತೆಯ ಅಂಡರ್ ಪಾಸ್ ಹತ್ತಿರವಿರುವ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಸೂಚಿಸಿದರು.
ಚಿತ್ರದುರ್ಗ ನಗರದ ಬಾಪೂಜಿ ಕಾಲೇಜು ಮುಂಭಾಗ ಪಾದಾಚಾರಿ ಸ್ಕೈವಾಕ್ ನಿರ್ಮಾಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆಯ ಸಹಕಾರ ಪಡೆದು, ಕಾಮಗಾರಿ ಕೈಗೆತ್ತಿಕೊಳ್ಳುವಂತೆ ತಿಳಿಸಿದರು.
ಇದನ್ನೂ ಓದಿ: ಹಿರಿಯೂರು ನಗರ, ಟೋಲ್ ಬಳಿಯಿರುವ ಗೂಡಂಗಡಿ ತೆರವಿಗೆ ಡಿಸಿ ಗಡುವು
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಗುಣಮಟ್ಟದ್ದಾಗಿಲ್ಲ, ವಿಡಿಯೋದಲ್ಲಿ ಕನಿಷ್ಟ ಪಕ್ಷ ವಾಹನದ ನಂಬರ್ ಕೂಡ ಗೋಚರಿಸುವುದಿಲ್ಲ, ಹೀಗಾಗಿ ಇದರಿಂದ ಏನೂ ಪ್ರಯೋಜನವಿಲ್ಲ ಎಂದು ಡಿವೈಎಸ್‍ಪಿ ರಾಜಣ್ಣ ಅವರು ಹೇಳಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕೂಡಲೆ ಉತ್ತಮ ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉತ್ತಮ ಗುಣಮಟ್ಟದ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಚಿತ್ರದುರ್ಗ ನಗರಸಭೆಯವರು ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಇದನ್ನೂ ಓದಿ: ಗಾಂಧಿ ವೃತ್ತದಲ್ಲಿ ಬಹು ಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣಕ್ಕೆ ಡಿಪಿಆರ್
ಚಿತ್ರದುರ್ಗ ನಗರದ ಮಾತ್ರವಲ್ಲದೇ, ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯವರು ಹೇಳಿದ ಕಡೆ ಶಾಶ್ವತವಾಗಿ ಸಿ.ಸಿ.ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್. 48ರ ಚಿತ್ರದುರ್ಗದಿಂದ ಬೆಂಗಳೂರು ಕಡೆ ಹೋಗುವ ರಸ್ತೆಯಲ್ಲಿ ಗೊರ್ಲಡಕು ಗೇಟ್ ಜೆ.ಜೆ. ಹಳ್ಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸುಗಮ ಸಂಚಾರಕ್ಕೆ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಎರಡು ದಿನದೊಳಗೆ ರಸ್ತೆ ಕಾಮಗಾರಿ ಮುಗಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು. ಎರಡು ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಅರೆಸ್ಟ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಜೆಎಂಐಟಿ, ಕೆಳಗೋಟೆ ಬಳಿ ಪಾದಚಾರಿ ಸ್ಕೈವಾಕ್ ನಿರ್ಮಿಸಿ | ಡಿಸಿ ವೆಂಕಟೇಶ್
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
