ಮುಖ್ಯ ಸುದ್ದಿ
SUBSIDY; ಹೈನುಗಾರಿಕೆ ಮಾಡಲು ರೈತ ಮಹಿಳೆಯರಿಗೆ ಸಹಾಯಧನ
CHITRADURGA NEWS | 19 JULY 2024
ಚಿತ್ರದುರ್ಗ: 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ(SUBSIDY) ನೀಡುವ ಯೋಜನೆ ಕಾರ್ಯಕ್ರಮ ಅನುಮೋದನೆಯಾಗಿದೆ.
ಇದನ್ನೂ ಓದಿ: FARMERS; ರೈತರಿಗೆ ಹೊರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಗ್ರಹ | ಆರ್.ಆರ್ ಸಂಖ್ಯೆಗೆ ಆಧಾರ್ ಜೋಡಣೆಗೆ ವಿರೋಧ
ಸರ್ಕಾರದಿಂದ ಅನುಮೋದನೆಯಾಗಿರುವಂತೆ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯನ್ವಯ ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕುವಾರು ಗುರಿ ನಿಗಧಿಪಡಿಸಲಾಗಿದೆ.
ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸಾಲ ಪಡೆದಿರುವ ಅರ್ಹ ಫಲಾನುಭವಿಗಳು ಅಗತ್ಯ ಸೂಕ್ತ ದಾಖಲಾತಿಗಳೊಂದಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪಶುಚಿಕಿತ್ಸಾಲಯ ಪಶುವೈದ್ಯಾಧಿಕಾರಿ ಅವರನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: SALUMARADA THIMMAKKA; ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ರಜತ ಮಹೋತ್ಸವ | ಸಸಿ ನೆಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕಿನ ಪಶುಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ದೂರವಾಣಿ ಸಂಖ್ಯೆ 948294311, ಚಳ್ಳಕೆರೆ 9448816499, ಹೊಳಲ್ಕೆರೆ 8073900950, ಹೊಸದುರ್ಗ 9945298407, ಹಿರಿಯೂರು 9483451044 ಹಾಗೂ ಮೊಳಕಾಲ್ಮುರು 900964820 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.