
CHITRADURGA NEWS | 1 JUNE 2026
ಚಿತ್ರದುರ್ಗ: ಇತ್ತೀಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯೂರು ಶಾಸಕರಾಗಿದ್ದ ಡಿ.ಸುಧಾಕರ್ ಅವರ ಪುತ್ರ ಸುಹಾಸ್ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಭೇಟಿ ಮಾಡಿರುವುದಾಗಿ ಸುಹಾಸ್ ಸುಧಾಕರ್ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಅಡಿಕೆ ಧಾರಣೆ | ಜೂನ್ 1 | ರಾಜ್ಯದ ಅಡಿಕೆ ರೇಟ್
ಡಿ.ಸುಧಾಕರ್ ಅವರ ಫೇಸ್‌ಬುಕ್ ಖಾತೆಯಲ್ಲೇ ಸುಹಾಸ್ ಅವರ ಕಾರ್ಯಕ್ರಮಗಳು ಪ್‌ರಕಟವಾಗುತ್ತಿದ್ದು, ಡಿ.ಕೆ.ಶಿವಕುಮಾರ್ ಭೇಟಿಯ ಪೋಟೋ ಕೂಡಾ ಇದೇ ಖಾತೆಯಲ್ಲಿ ಪ್ರಕಟವಾಗಿದೆ.
ಭೇಟಿ ನಂತರ, ಡಿಕೆಶಿ ಕುರಿತು ಬರೆದುಕೊಂಡಿರುವ ಸುಹಾಸ್, ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ದೀರ್ಘ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಜನಪರ ನಾಯಕತ್ವದ ಮೂಲಕ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಶಕ್ತಿ ಇದೆ.
ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಈ ಹೊಸ ಜವಾಬ್ದಾರಿಯಲ್ಲಿ ಇನ್ನಷ್ಟು ಯಶಸ್ಸುಗಳು ದೊರೆಯಲಿ, ಜನರ ಆಶಯಗಳನ್ನು ಈಡೇರಿಸುವ ನಾಯಕತ್ವ ನಿಮ್ಮದಾಗಲಿ ಎಂದು ಹಾರೈಸುತ್ತೇನೆ. ನಿಮ್ಮ ಮುಂದಿನ ರಾಜಕೀಯ ಪಯಣಕ್ಕೆ ಹೃತ್ಪೂರ್ವಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಇನ್ನೂ ಈ ಭೇಟಿ ವೇಳೆ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕೂಡಾ ಇದ್ದಾರೆ.
ಸುಧಾಕರ್ ನಿಧನದಿಂದ ಸುಹಾಸ್ ಹಾಗೂ ಕುಟುಂಬ ದುಃಖದಲ್ಲಿತ್ತು. ಕೆಲ ದಿನಗಳಿಂದ ಹಿರಿಯೂರು ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ್ದಾರೆ. ಮಳೆಯಿಂದ ಭರ್ತಿಯಾಗಿರುವ ಅಂಬಲಗೆರೆ ಕೆರೆಗೆ ಬಾಗೀನ ಅರ್ಪಣೆಯನ್ನೂ ಮಾಡಿದ್ದರು.
ಇದನ್ನೂ ಓದಿ:ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
ಬಹುಶಃ ಆಗಸ್ಟ್ ವೇಳೆಗೆ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಡಿ.ಸುಧಾಕರ್ ಪುತ್ರ ಸುಹಾಸ್ ಅವರ ನಡೆ ಸಹಜವಾಗಿ ಕುತೂಹಲ ಮೂಡಿಸುತ್ತಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
