
CHITRADURGA NEWS | 10 October 2025
ಹೊಸದುರ್ಗ: 23ನೇ ವರ್ಷದ 10ನೇ ತಿಂಗಳಸುಜ್ಞಾನ-ಸಂಗಮ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಇಂದು ಸಂಜೆ ಕುಂಚಿಟಿಗ ಮಹಾಸಂಸ್ಥಾನ ಮಠದ ಕುಂಚ ಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಅ.18 ರವರೆಗೆ ವಿಸ್ತರಣೆ | ಜಿಲ್ಲಾಧಿಕಾರಿ
ಹೊಸದುರ್ಗ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಶ್ರೀಕ್ಷೇತ್ರ ಕುಂಚಗಿರಿ ಕಾಯಕಯೋಗಿ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸುವರು.
ಹೊಸದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವಿಜಯರಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಗುಳಿಹಟ್ಟಿ ಹಾಲಸಿದ್ದಪ್ಪ ಅಧ್ಯಕ್ಷತೆ ವಹಿಸುವರು.
ಹೊಸದುರ್ಗ ಉದ್ಯಮಿ ಜ್ಞಾನೇಶ್ ಕಬ್ಬಳ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಸಾಗರ ಲೇಖಕರು ಹಾಗೂ ಕನ್ನಡ ಉಪನ್ಯಾಸಕರಾದ ಡಾ.ಸರ್ಫ್ರಾಜ್ ಚಂದ್ರಗುತ್ತಿ ವಚನಸಾಹಿತ್ಯ ಹಾಗೂ ಮಹಿಳೆ ಕುರಿತು ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ಹೊಸದುರ್ಗ ನಾಯಕ ಸಮಾಜ ತಾಲೂಕು ಅಧ್ಯಕ್ಷರಾದ ಎನ್.ತಿಪ್ಪೇಸ್ವಾಮಿ ಭಾಗವಹಿಸುವರು.
ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ 2 ವಿಶೇಷ ರೈಲು | ಯಾವ ಮಾರ್ಗದ ಮೂಲಕ ಹೋಗಲಿವೆ.. ಇಲ್ಲಿದೆ ಮಾಹಿತಿ
ಜಾನಕಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾದ ಮಹಾಂತೇಶ್ ದೊಡ್ಡಘಟ್ಟ ಸನ್ಮಾನಿಸಲಾಗುವುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
