By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    govinda karjola
    ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
    5 hours ago
    ಅರ್ಜಿ ಅಹ್ವಾನ
    HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
    6 hours ago
    ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
    6 hours ago
    ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
    ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
    6 hours ago
    ಪಾರಾ ಟೇಕ್ವಾಂಡೋ ಪಂದ್ಯಾವಳಿ-2026ರ ಸಮಾರೋಪ ಸಮಾರಂಭ
    ಆತ್ಮರಕ್ಷಣೆಗಾಗಿ ಟೇಕ್ವಾಂಡೋ ಕಲಿಯುವುದು ಅಗತ್ಯ | ಎಸ್.ಕೆ.ಬಸವರಾಜನ್
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    22 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    7 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    6 hours ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    7 hours ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    1 day ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    2 days ago
Reading: ಬೇಸಿಗೆ ಆರಂಭ | ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಿ | ಡಿಸಿ ವೆಂಕಟೇಶ್ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೇಸಿಗೆ ಆರಂಭ | ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಿ | ಡಿಸಿ ವೆಂಕಟೇಶ್ ಸೂಚನೆ

News Desk Chitradurga News
Last updated: 17 February 2026 19:42
News Desk Chitradurga News
6 months ago
Share
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
SHARE

CHITRADURGA NEWS | 17 FEBRUARY 2026

ಚಿತ್ರದುರ್ಗ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಗ್ರಾಮ ಅಥವಾ ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ ಉಂಟಾದಲ್ಲಿ, ಪತ್ರಿಕೆ, ಮಾಧ್ಯಮಗಳಲ್ಲಿ ವರದಿ ಬರುವವರೆಗೂ ಕಾಯದೆ ತಕ್ಷಣವೇ ಸ್ಪಂದಿಸಬೇಕು. ಖಾಸಗಿ ಬೋರ್‍ವೆಲ್‍ಗಳಿಂದ ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸುವಾಗ ಕಡ್ಡಾಯವಾಗಿ ನೀರಿನ ಗುಣಮಟ್ಟದ ವರದಿ ಪಡೆದುಕೊಳ್ಳಬೇಕು. 

ನೀರಿನ ಮೂಲ ಮತ್ತು ವಿತರಣಾ ಕೇಂದ್ರಗಳೆರಡರಲ್ಲೂ ನೀರಿನ ಮಾದರಿಯ ಪರೀಕ್ಷೆ ನಡೆಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ನೀರಿನ ಟ್ಯಾಂಕರ್‍ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಶುದ್ಧ ನೀರು ಪೂರೈಸಬೇಕು. ಬೇಸಿಗೆಯಲ್ಲಿ ಹಾಸ್ಟೆಲ್ ಮತ್ತು ಕಾಲೇಜುಗಳಲ್ಲಿ ನೀರಿನ ಅಭಾವ ಉಂಟಾಗದಂತೆ ವಿಶೇಷ ನಿಗಾ ವಹಿಸಬೇಕು. 

ಇದನ್ನೂ ಓದಿ: ಶೈಕ್ಷಣಿಕ ಚಟುವಟಿಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ

ಹದಿನೈದು ದಿನಗಳ ಅವಧಿಗೆ ಒಂದು ಸುತ್ತಿನಂತೆ ಮುಂಬರುವ ಬೇಸಿಗೆ ತಿಂಗಳುಗಳಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾಗಬಹುದಾದ ಹಳ್ಳಿ ಹಾಗೂ ಪ್ರದೇಶಗಳನ್ನು ಗುರುತಿಸಿ, ನಿಗದಿತ ನಮೂನೆಯಲ್ಲಿ ಪ್ರತಿ ವಾರವೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಕುಡಿಯುವ ನೀರಿನ ಸರಬರಾಜಿನಲ್ಲಿ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಮುಲಾಜು ಇಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟ.ವೆಂಕಟೇಶ್ ಎಚ್ಚರಿಸಿದರು.

ಚರಂಡಿ ಸ್ವಚ್ಛತೆಗೆ ಸೂಚನೆ:

ನಗರ, ಪಟ್ಟಣ ಪ್ರದೇಶಗಳಲ್ಲಿ ಚರಂಡಿಗಳು ಬ್ಲಾಕ್ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿವೆ. ತಕ್ಷಣವೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿ ವಾರ ಇದರ ಮೇಲ್ವಿಚಾರಣೆ ನಡೆಸಬೇಕು. ಮುಂಬರುವ ನಾಯಕನಹಟ್ಟಿ ಜಾತ್ರೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವುದರಿಂದ, ಕುಡಿಯುವ ನೀರಿನ ಪೂರೈಕೆಗೆ ಯಾವುದೇ ವ್ಯತ್ಯಯವಾಗದಂತೆ ಹೆಚ್ಚುವರಿ ಬೋರ್‍ವೆಲ್‍ಗಳು ಮತ್ತು ನೀರಿನ ಸರಬರಾಜು ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಸಂದರ್ಭದಲ್ಲಿ ಸೂಚಿಸಿದರು.

ವೈಜ್ಞಾನಿಕ ಕ್ರಿಯಾ ಯೋಜನೆ ತಯಾರಿಕೆಗೆ ನಿರ್ದೇಶನ:  

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ತಹಶೀಲ್ದಾರ್, ತಾ.ಪಂ. ಇಒ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್‍ಗಳು ಜಂಟಿಯಾಗಿ ಸಮೀಕ್ಷೆ ನಡೆಸಿ, ವೈಜ್ಞಾನಿಕ ವರದಿ ಸಲ್ಲಿಸುವಂತೆ ಜಿ.ಪಂ. ಸಿಇಓ ಡಾ.ಆಕಾಶ್ ಸಭೆಯಲ್ಲಿ ನಿರ್ದೇಶನ ನೀಡಿದರು.

ಇದನ್ನೂ ಓದಿ: SC, ST ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನ್ಯಾಯ | ಮಾಜಿ ಸಂಸದ ಉಗ್ರಪ್ಪ

ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಗ್ರಾಮಗಳಲ್ಲಿ ಉಂಟಾಗಬಹುದಾದ ನೀರಿನ ಅಭಾವವನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಅತಿ ಹೆಚ್ಚು ನೀರಿನ ಸಮಸ್ಯೆ ಎದುರಿಸಬಹುದಾದ ಗ್ರಾಮಗಳನ್ನು ಗುರುತಿಸಿ, ಅಲ್ಲಿನ ಜನಸಂಖ್ಯೆ ಮತ್ತು ಲಭ್ಯವಿರುವ ಬೋರ್‍ವೆಲ್‍ಗಳ ಸ್ಥಿತಿಗತಿ ಬಗ್ಗೆ ತಕ್ಷಣವೇ ವರದಿ ನೀಡಬೇಕು.

ನೀರಿನ ಕೊರತೆಯಿರುವ ಕಡೆ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆಗೆ ಪಡೆಯುವುದು, ಹೊಸ ಬೋರ್‍ವೆಲ್ ಕೊರೆಯುವುದು ಅಥವಾ ನೆರೆಯ ಗ್ರಾಮಗಳಿಂದ ಪೈಪ್‍ಲೈನ್ ಮೂಲಕ ನೀರು ಪೂರೈಸುವ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು. 

2023, 2024 ಮತ್ತು 2025ನೇ ಸಾಲಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯಾದ ಗ್ರಾಮಗಳ ಮಾಹಿತಿ, ಹೊಸ ಬೋರ್‍ವೆಲ್‍ಗಳ ಸಂಖ್ಯೆ ಮತ್ತು ಖಾಸಗಿ ಬೋರ್‍ವೆಲ್ ಬಾಡಿಗೆಗೆ ಪಡೆದ ವಿವರಗಳನ್ನು ಹೋಲಿಕೆ ಮಾಡಿ ಅಧಿಕಾರಿಗಳು ವರದಿ ಸಿದ್ಧಪಡಿಸಿ, ಶುಕ್ರವಾರದ ಒಳಗೆ ವರದಿ ನೀಡಬೇಕು. 

ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗವಿಕಲರ ನಡೆ ರಾಜಕೀಯ ಕಡೆ ಅಭಿಯಾನ

ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳಲ್ಲೇ ಅತ್ಯಂತ ಜಾಗರೂಕತೆಯಿಂದ ಮತ್ತು ವೈಜ್ಞಾನಿಕವಾಗಿ ಕುಡಿಯುವ ನೀರಿನ ನಿರ್ವಹಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಸಿಇಓ ಡಾ.ಆಕಾಶ್ ಹೇಳಿದರು.  

ಹೆಚ್ಚುವರಿ ಕಡಲೆ ಖರೀದಿ ಕೇಂದ್ರಗಳ ಸ್ಥಾಪನೆ:

ಜಿಲ್ಲೆಯಲ್ಲಿ ಈ ಬಾರಿ ಕಡಲೆ ಬೆಳೆ ಇಳುವರಿ ಉತ್ತಮವಾಗಿದ್ದು, ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲು ಅನುಕೂಲವಾಗುವಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 37,000 ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಿದೆ. ಸುಮಾರು 40 ಸಾವಿರ ಟನ್ ಕಡಲೆ ಇಳುವರಿ ನಿರೀಕ್ಷಿಸಲಾಗಿದೆ. ರಾಜ್ಯಾದ್ಯಂತ ಬೆಂಬಲ ಯೋಜನೆಯಡಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅನುಮತಿ ನೀಡಲಾಗಿದೆ. ಕಡಲೆ ಖರೀದಿಗೆ ಜಿಲ್ಲೆಗೆ ಯಾವುದೇ ಗುರಿ ನಿಗದಿ ಮಾಡಿಲ್ಲ. ಆದಾಗ್ಯೂ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ವಹಿಸುವುದಾಗಿ ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಇದನ್ನೂ ಓದಿ: ಮಾರ್ಚ್ 06 ರಂದು ನಾಯಕನಹಟ್ಟಿ ಜಾತ್ರೆ | ಪ್ರಾಣಿಬಲಿ ನಿಷೇಧ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾಂತರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDrinking WaterSummerಕುಡಿಯುವ ನೀರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೇಸಿಗೆ
Share This Article
Facebook Email Print
Previous Article ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಉಗ್ರಪ್ಪ ಮಾತನಾಡಿದರು SC, ST ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನ್ಯಾಯ | ಮಾಜಿ ಸಂಸದ ಉಗ್ರಪ್ಪ
Next Article Kannada Sahitya Sammelan ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ಚಾಲನೆ | ಮೆರುಗು ನೀಡಿದ ಕಲಾ ತಂಡಗಳು | ಕನ್ನಡದ ಮನಸ್ಸುಗಳು
Leave a Comment

Leave a Reply Cancel reply

Your email address will not be published. Required fields are marked *

govinda karjola
ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅಂಬೇಡ್ಕರ್ ಓದು ಕಾರ್ಯಕ್ರಮ
ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
ಮುಖ್ಯ ಸುದ್ದಿ
ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up