CHITRADURGA NEWS | 13 OCTOBER 2026
ಚಿತ್ರದುರ್ಗ: ಸರ್ಕಾರದ ಆದೇಶದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಮುಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಖರೀದಿಸಲು ಪ್ರಕ್ರಿಯೆ ಆರಂಭಿಸಲಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ
ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ನಿರ್ಣಯದಂತೆ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತದಿಂದ ಪ್ರತಿ ಕ್ವಿಂಟಾಲ್ಗೆ ರೂ. 8,343/- ರಂತೆ ಸೂರ್ಯಕಾಂತಿಯನ್ನು ಖರೀದಿ ಮಾಡಲಾಗುತ್ತದೆ.
ನೋಂದಣಿಗೆ 80 ದಿನಗಳು ಹಾಗೂ ಖರೀದಿ ಪ್ರಕ್ರಿಯೆಗೆ 90 ದಿನಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ರೈತರು ಸೂರ್ಯಕಾಂತಿ ಬೆಳೆಗಾರರು ಪ್ರತಿ ಎಕರೆಗೆ 04 ಕ್ವಿಂಟಾಲ್ ಹಾಗೂ ಗರಿಷ್ಠ 20 ಕ್ವಿಂಟಾಲ್ವರೆಗೆ ಮಾರಾಟ ಮಾಡಲು ಅವಕಾಶವಿದೆ.
ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ರೈತ ಉತ್ಪಾದಕ ಸಂಸ್ಥೆಗಳಲ್ಲಿ ಹಾಗೂ ಹಿರಿಯೂರು ತಾಲೂಕಿನ ಮಸ್ಕಲ್, ಯರಬಳ್ಳಿ, ಧರ್ಮಪುರ, ಚಳ್ಳಕೆರೆ ತಾಲೂಕಿನಲ್ಲಿ ರಾಮಜೋಗಿಹಳ್ಳಿ, ಚಿತ್ರದುರ್ಗ ತಾಲೂಕಿನಲ್ಲಿ ತುರುವನೂರುನಲ್ಲಿ ವಿವಿಧೋದ್ದೇಶ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಲ್ಲಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
ಇದನ್ನೂ ಓದಿ: ಮಾಜಿ ಸಚಿವ ಅಶ್ವತ್ಥರೆಡ್ಡಿ ಮೊಮ್ಮಗ ಸಂದೀಪ್ ಗುಂಡಾರ್ಪಿ ಕಾಂಗ್ರೆಸ್ಗೆ ಸೇರ್ಪಡೆ
ಹೆಚ್ಚಿನ ಮಾಹಿತಿಗಾಗಿ ಕೆ.ಒ.ಎಫ್ ಖರೀದಿ ಅಧಿಕಾರಿ ಮಹಮ್ಮದ್ ರಿಯಾಜ್ ದೂರವಾಣಿ ಸಂಖ್ಯೆ 9742819478 ಸಂಪರ್ಕಿಸಬಹುದಾಗಿದೆ. ಸೂರ್ಯಕಾಂತಿ ಬೆಳೆಗಾರರು ಇದರ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

