ಮುಖ್ಯ ಸುದ್ದಿ
ಚಿತ್ರದುರ್ಗ ಬಂದ್‍ಗೆ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ

CHITRADURGA NEWS | 23 JANUARY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಜ.23 ರಂದು ಆಯೋಜಿಸಿರುವ ಚಿತ್ರದುರ್ಗ ಬಂದ್‍ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ ಸೂಚಿಸಿದೆ ಎಂದು ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ
ಸಾಹಿತ್ಯ ಪರಿಷತ್ತು ನೆಲ, ಜಲ ಮತ್ತು ಭಾಷೆಯ ಅಸ್ಮಿತೆಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ರಾಜ್ಯದ ಕಾವೇರಿ, ಕೃಷ್ಣ ಸೇರಿದಂತೆ ನಾನಾ ನದಿ ನೀರಿನ ಸಮಸ್ಯೆಗಳು ಉಂಟಾದ ಸಂದರ್ಭಗಳಲ್ಲಿ ಜರುಗಿದ ಹೋರಾಟ, ಪ್ರತಿಭಟನೆಗಳಿಗೆ ಪರಿಷತ್ತು ಬೆಂಬಲವಾಗಿ ನಿಂತಿದೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ವರ್ಗಾವಣೆ
ಇದೇ ರೀತಿ ಭದ್ರಾ ಮೇಲ್ದಂಡೆ ಯೋಜನೆಯು ಬರದ ಜಿಲ್ಲೆಯ ಜೀವನಾಡಿಯಾಗಿದೆ. ನಾನಾ ಕಾರಣಗಳಿಂದ ಈ ಯೋಜನೆ ಕುಂಟುತ್ತಾ ಸಾಗಿದೆ. ಈ ಹಿನ್ನೆಲೆಯಲ್ಲಿ ಜರುಗುತ್ತಿರುವ ರಾಜಕೀಯೇತರ ಪ್ರತಿಭಟನೆಗೆ ಪರಿಷತ್ತು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಜಿಲ್ಲೆಯ ಕನ್ನಡ ಪರಿಷತ್ತಿನ ಆಜೀವ ಸದಸ್ಯರು, ಕಸಾಪ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮನವಿ ಮಾಡಿದ್ದಾರೆ.
