Connect with us

    ಬಾಡೂಟಕ್ಕೆ ಕಣ್ಗಾವಲು | ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್ 

    ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ಲೋಕಸಮರ 2024

    ಬಾಡೂಟಕ್ಕೆ ಕಣ್ಗಾವಲು | ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್ 

    CHITRADURGA NEWS | 02 APRIL 2024

    ಚಿತ್ರದುರ್ಗ: ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಮಂದಿರ, ಮಸೀದಿ, ಚರ್ಚುಗಳಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸುವುದು, ಮತದಾರರ ಮನವೊಲಿಕೆಯ ಭಾಗವಾಗಿ ಪಟ್ಟಣದ ಹೊರವಲಯಗಳಲ್ಲಿ ಬಾಡೂಟ, ಔತಣ ಏರ್ಪಡಿಸುವುದು ನಡೆಯುತ್ತಿರುತ್ತವೆ. ಇವೆಲ್ಲವೂಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ, ನಿಯಮಾನುಸಾರ ಕ್ರಮಕ್ಕೆ ವರದಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

    ಇದನ್ನೂ ಓದಿ: ಬೆಳೆ ವಿಮೆ ಕಂಪನಿ ವಿರುದ್ಧ ದೂರು ದಾಖಲು

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು, ವಿವಿಧ ತಂಡಗಳ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಚುನಾವಣೆಗೆ ಸಂಬಂಧಿಸಿದಂತೆ ಈಗವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ.

    ಆಯ್ಕೆ ಬಯಸುವ ಉಮೇದುವಾರರು ತಮ್ಮ ಅರ್ಜಿ ಸಲ್ಲಿಕೆಗೆ ಕೊನೆಯ ಮೂರು ದಿನಗಳು ಮಾತ್ರ ಉಳಿದಿದ್ದು, ಚುನಾವಣೆಯ ಕರ್ತವ್ಯ ದಿನೇ ದಿನೇ ಹೆಚ್ಚಾಗುತ್ತಾ ಹೋಗುತ್ತದೆ. ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷತನತೋರದೇ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರು.

    ಇದನ್ನೂ ಓದಿ: ಅಖಾಡಕ್ಕೆ ರಾಜಾಹುಲಿ ಎಂಟ್ರಿ ಶಮನವಾಯ್ತು ಚಿತ್ರದುರ್ಗ ಬಿಜೆಪಿ ಬಂಡಾಯ

    ಚಿತ್ರದುರ್ಗ ಲೋಕಸಭಾ ಚುನಾವಣೆಗೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ, ತಪ್ಪಿದಲ್ಲಿ ಸಂಭಾವ್ಯ ಘಟನೆಗಳಿಗೆ ತಮ್ಮನ್ನೆ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

    ಚೆಕ್‌ಪೋಸ್ಟ್ ಸಿಬ್ಬಂಧಿಗಳು ಹಾಗೂ ಸಂಚಾರಿದಳ ಸೇರಿದಂತೆ ವಿವಿಧ ತಂಡಗಳು ಸದಾ ಎಚ್ಚರಿಕೆಯಿಂದಿದ್ದು ಕಾರ್ಯನಿರ್ವಹಿಸಬೇಕು. ಈ ವಿಷಯಗಳಲ್ಲಿ ನೋಡಲ್ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು, ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಯ ಅಧಿಕಾರಿಗಳು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿ, ಜಾಹಿರಾತು, ವೈಯಕ್ತಿಕ ತೇಜೋವಧೆ ಮಾಡುವಂತಹ ಸುದ್ದಿಭಾಗಗಳು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಪ್ರತಿ ವಿಡಿಯೋ ತುಣುಕುಗಳ ಬಗ್ಗೆ ಗಮನಿಸಿ, ನಿಯಮಾನುಸಾರ ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

    ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ

    ಚುನಾವಣಾ ಕರ್ತವ್ಯಕ್ಕೆ ಅಧಿಕಾರಿ-ಸಿಬ್ಬಂಧಿಗಳಿಗೆ ಈಗಾಗಲೇ ಹಲವು ತರಬೇತಿಗಳಾಗಿದ್ದು, ಇನ್ನುಳಿದ ಮತಗಟ್ಟೆ ಮತ್ತಿತರ ಸಿಬ್ಭಂದಿಗಳಿಗೆ ಶೀಘ್ರದಲ್ಲಿ ತರಬೇತಿ ಆಯೋಜಿಸಲಾಗುತ್ತಿದೆ. ಸಲ್ಲದ ನೆಪವೊಡ್ಡಿ ಚುನಾವಣಾ ಕರ್ತವ್ಯದಿಂದ ವಿನಾಯಿತ ಕೇಳುವ ನೌಕರರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.

    85+ ಮತ್ತು ವಿಕಲಾಂಗರು ಸೇರಿದಂತೆ 12ಡಿ ತಾವಿರುವಲ್ಲಿಯೇ ಮತದಾನ ಮಾಡಲು ಕೋರಿಕೆ ಸಲ್ಲಿಸುವ ಅರ್ಜಿಯ ಪ್ರತಿಯನ್ನು ಅರ್ಹರೆಲ್ಲರಿಗೂ ತಲುಪಿಸಲಾಗುವುದು. ಅಂಚೆ ಮತದಾನ ಬಯಸಿರುವವರ ವಿವರಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಕ್ರಮ ಪ್ರಾಧಿಕಾರಕ್ಕೆ ತಲುಪಿಸುವಂತೆ ಸೂಚಿಸಿದ ಅವರು, ಚುನಾವಣೆಯ ಎಲ್ಲಾ ಕಾರ್ಯಗಳಲ್ಲಿ ಅಧಿಕಾರಿಗಳ ನಡುವೆ ಸಮನ್ವಯತೆ ಇರಬೇಕಾದದ್ದು ಅಗತ್ಯ ಎಂದರು.

    ಇದನ್ನೂ ಓದಿ: ಜಿಲ್ಲೆಗೆ ಆಗಿರುವ ಅನ್ಯಾಯ ಸರಿಪಡಿಸಲು ಕಾಂಗ್ರೆಸ್ ಗೆಲ್ಲಬೇಕು

    ಈ ಹಿಂದಿನ ಚುನಾವಣೆಗಳಲ್ಲಿ ಶೇ.70ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿನ ಮತದಾರರ ಮನವೊಲಿಕೆಗೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುವುದು, ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕೆ ಅಗತ್ಯವಾಗಿರುವ ನೀರು, ನೆರಳು, ವಿದ್ಯುತ್ ಮತು ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸಬೇಕು.

    ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಕುಡಿಯುವ ನೀರು ಸರಬರಾಜು ಮುಂತಾದ ಇಲಾಖೆಯ ಅಧಿಕಾರಿಗಳು ಚುನಾವಣಾ ಕಾರ್ಯ ಮುಕ್ತಾಯಗೊಳ್ಳುವವರೆಗೆ ಕಾರ್ಯಸ್ಥಾನದಲ್ಲಿರುವಂತೆ ಸೂಚಿಸಿದರು.

    ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ ಅವರು ಮಾತನಾಡಿ, ಚೆಕ್‍ಪೆÇೀಸ್ಟ್ಗಳನ್ನು ಹಾದು ಹೋಗುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚಿಸಿದರು.

    ಇದನ್ನೂ ಓದಿ: ಅಪ್ಪ-ಮಗನ ಸಂಬಂಧ ಕೆಡಿಸಲು ಬರಬೇಡ

    ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಎಂ.ಕುಮಾರಸ್ವಾಮಿ ಸೇರಿದಂತೆ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು, ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಲೋಕಸಮರ 2024

    To Top