ಮುಖ್ಯ ಸುದ್ದಿ
ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಸಮೀಕ್ಷೆ | ವಿಧಾನ ಪರಿಷತ್ತಿನಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ | ಕಾರ್ಖಾನೆ ಆರಂಭಿಸುವ ಬಗ್ಗೆ ಕೆ.ಎಸ್.ನವೀನ್ ಪ್ರಶ್ನೆ

CHITRADURGA NEWS | 21 FEBRUARY 2024
ಚಿತ್ರದುರ್ಗ: ಅಗತ್ಯ ಪ್ರಮಾಣದ ಕಬ್ಬು ಲಭ್ಯವಾದರೆ ಹಿರಿಯೂರು ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಪ್ರಯತ್ನಿಸಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ.
ವಾಣಿವಿಲಾಸ ಸಕ್ಕರೆ ಕಾರ್ಖಾನೆ ನೂರಾರು ಎಕರೆಯಲ್ಲಿದ್ದು, ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಗೆ ನೀರು ಬರುತ್ತಿರುವುದರಿಂದ ಈ ಸಹಕಾರಿ ಸಂಸ್ಥೆಯನ್ನು ಪುನಶ್ಚೇತನ ಮಾಡುವ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪರಿಷತ್ತಿನ ಕಲಾಪದಲ್ಲಿ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಭೂ ಸೇನಾ ನೇಮಕಾತಿಗೆ ಅರ್ಜಿ ಆಹ್ವಾನ
ಈ ಪ್ರಶ್ನೆಗೆ ಉತ್ತರಿಸಿರುವ ಸಕ್ಕರೆ ಸಚಿವರಾದ ಶಿವಾನಂದ ಎಸ್. ಪಾಟೀಲ್, ಈಗ ಇರುವ ಕಬ್ಬು ನುರಿಸುವ ಸಾಮಥ್ರ್ಯವನ್ನು ಹೆಚ್ಚಳ ಮಾಡದಿದ್ದರೆ ಲಾಭದಾಯಕವಾಗಿ ನಡೆಸಲು ಸಾಧ್ಯವಿಲ್ಲ. ಈಗ 1,250 ಟಿಸಿಡಿ ಸಾಮಥ್ರ್ಯವಿದ್ದು, ಕನಿಷ್ಠ 5000 ಟಿಸಿಡಿ ಇದ್ದರೆ ಮಾತ್ರ ಲಾಭದಾಯಕವಾಗಿ ನಡೆಸಲು ಸಾಧ್ಯ. ಈ ಕಾರ್ಖಾನೆ 2003-04ನೇ ಸಾಲಿನಿಂದ ಕಬ್ಬು ಅರೆಯುವ ಕಾರ್ಯವನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದರು.

ಆರ್ಥಿಕ ಸಂಕಷ್ಟದಿಂದ ಹಾಗೂ ಇನ್ನಿತರೆ ಕಾರಣಗಳಿಂದ ಸ್ಥಗಿತಗೊಂಡ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಕಬ್ಬು ಬೆಳೆಗಾರರ, ರೈತರ ಹಿತದೃಷ್ಟಿಯಿಂದ ಖಾಸಗಿಯವರಿಗೆ ಧೀರ್ಘಾವಧಿಯ ಮೇಲೆ ಎಲ್‍ಆರ್‍ಟಿಓ ಆಧಾರದಲ್ಲಿ ಗುತ್ತಿಗೆ ನೀಡಿ ಪುನಶ್ಚೇತನ ಮಾಡುವುದು ಸರ್ಕಾರದ ನೀತಿಯಾಗಿದೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ನೀಡಿ ಪುನಶ್ಚೇತನಗೊಳಿಸಲು 2007 ರಲ್ಲಿ ಹಲವಾರು ಬಾರಿ ಟೆಂಡರ್ ಕರೆಯಲಾಗಿತ್ತು. ಆದರೆ ಟೆಂಡರ್ನಲ್ಲಿ ಯಾರೂ ಭಾಗವಹಿಸದ ಕಾರಣ ಸರ್ಕಾರದ ಪ್ರಯತ್ನಕ್ಕೆ ಫಲ ಸಿಗಲಿಲ್ಲ ಎಂದು ಸಚಿವರು ಉತ್ತರಿಸಿದ್ದಾರೆ.

ಕೆ.ಎಸ್.ನವೀನ್
ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು 2013ರಲ್ಲಿ ಸಮಾಪನಗೊಳಿಸಿ, ಸಮಾಪನಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಸಹಕಾರ ಸಂಘಗಗಳ ಉಪನಿಬಂಧಕರು ಸಮಾಪನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ
ವಾಣಿವಿಲಾಸ ಸಕ್ಕೆ ಕಾರ್ಖಾನೆಗೆ ಸಂಬಂಧಿಸಿದಂತೆ ಸುಮಾರು 270.37 ಎಕರೆ ಜಮೀನಿದ್ದು, ಸದರಿ ಕಾರ್ಖಾನೆಯನ್ನು ಪುನರಾರಂಭಿಸಲು ಕೋರಿ ಜನಪ್ರತಿನಿಧಿಗಳು, ರೈತ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಮನವಿ ಸ್ವೀಕೃತವಾಗಿವೆ.
ಈ ಬಗ್ಗೆ Techno Economic feasibility Report ಪಡೆದು, ಇದರ ಸಾಧಕ ಬಾಧಕಗಳ ಕುರಿತು ನಿಯಮಾನುಸಾರ ಪರಿಶೀಲಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಲಿಖಿತವಾಗಿ ಉತ್ತರಿಸಿದ್ದಾರೆ.
